ಉತ್ತಮ ಸೇವೆಯಿಂದ ವ್ಯಕ್ತಿತ್ವ ವೃದ್ಧಿ
ಕ.ಪ್ರ ವಾರ್ತೆ , ಕಡೂರು , ಮಾ.24
ಇನ್ನೊಬ್ಬರಿಗೆ ಪರೋಪಕಾರಿಯಾಗಿ ಸೇವೆ ಸಲ್ಲಿಸಿದಲ್ಲಿ ಪ್ರತಿಯೊಬ್ಬರೂ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಯಲದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದ ಮುಖ್ಯಾಧಿಕಾರಿ ಕುಂದನ್ ಬಸವರಾಜು ಹೇಳಿದರು.
ಅವರು ಕಡೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 1 ಮತ್ತು 2ನೇ ಘಟಕದ ರಕ್ತದಾನ ಶಿಬಿರವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮನುಷ್ಯನಲ್ಲಿ ಉಪಕಾರ ಸ್ಮರಣೆ ಇಲ್ಲದೆ ಸ್ವಾರ್ಥಿಯಾದಲ್ಲಿ ಆತನ ಬದುಕು ಸೂತ್ರವಿಲ್ಲದ ಗಾಳಿಪಟದಂತಾಗಿ ದಿಕ್ಕು ದೆಸೆಯಿಲ್ಲದೆ ಎಲ್ಲೋ ಬೀಳುವ ಮೂಲಕ ಭವಿಷ್ಯ ಮಂಕಾಗುತ್ತದೆ. ವಿದ್ಯಾರ್ಥಿ ದಿಸೆಯಲ್ಲಿಯೇ ಸೇವಾಮನೋಭಾವ ಅಳವಡಿಸಿಕೊಳ್ಳಬೇಕು. ರಕ್ತದಾನ ಶಿಬಿರವು ಕಡೂರು ಆಯೋಜಿಸುತ್ತಿರುವುದು ಸಂತಸದ ಸಂಗತಿ ಎಂದರು.
ರಾ.ಸೇ.ಯೋ.ಅಧಿಕಾರಿ ಲಕ್ಷ್ಮೀಕಾಂತ್ ಪ್ರಾಸ್ಥಾವಿಕವಾಗಿ ಮಾತನಾಡಿ, ಕಳೆದ ಭಾರಿ ನಮ್ಮ ಕಾಲೇಜಿನಲ್ಲಿ 80 ಯೂನಿಟ್ ರಕ್ತದಾನ ನಡೆದಿತ್ತು. ಈ ಭಾರಿ ಇಡೀ ಜಿಲ್ಲೆಯಲ್ಲಿಯೇ ಹೆಚ್ಚು ರಕ್ತ ಸಂಗ್ರಹಿಸುವ ಉದ್ದೇಶವಿದ್ದು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನಕ್ಕೆ ಸಿದ್ಧರಾಗಿದ್ದಾರೆ ಎಂದರು.
ಅತಿಥಿಗಳಾಗಿದ್ದ ತಾಲೂಕು ವೈದ್ಯಾಧಿಕಾರಿ ಡಾ ಎಸ್.ಕೆ. ಪ್ರಭು ಮಾತನಾಡಿ, 2020ನೇ ಸಾಲಿನಲ್ಲಿ ಭಾರತದ ಮಾನವ ಸಂಪನ್ಮೂಲ ವಿಶ್ವದಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ ಎಂದರು.
ರಕ್ತದಾನದಿಂದ ಉತ್ತಮ ಆರೋಗ್ಯ: ಜಿಲ್ಲಾ ರಕ್ತನಿಧಿ ಅಧಿಕಾರಿ ಡಾ. ಶಿವದತ್ ಮಾತನಾಡಿ, ಒಬ್ಬ ನೀಡುವ ರಕ್ತ ನಾಲ್ಕು ಜನರ ಪ್ರಾಣ ಉಳಿಸುತ್ತದೆ. ರಕ್ತದಾನ ಮಾಡಿದ ವ್ಯಕ್ತಿಯಲ್ಲಿ ಹೊಸರಕ್ತ ಉತ್ಪಾದನೆಯಾಗಿ ಹೊಸ ಆರೋಗ್ಯ ಪಡೆಯಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಕೊಟ್ರೇಶಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ದಾನಿ ಮಹಾವೀರ ಸುರಾನ, ರಾ.ಸೇ.ಯೋ. ಘಟಕಾಧಿಕಾರಿ ಮಹೇಶ್, ಅಧ್ಯಾಪಕರು ಮತ್ತು ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

