ಚಿಕ್ಕಮಗಳೂರು

ಕಂಟ್ರೋಲ್ ರೂಂ

Published On :

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಯ ಮದ್ಯ ಮುಕ್ತ ಚುನಾವಣೆ ನಡೆಸುವ ದಿಸೆಯಿಂದ ಮುಂಜಾಗ್ರತವಾಗಿ ಜಿಲ್ಲೆ ಎಲ್ಲಾ ತಾಲೂಕುಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ. ಅಕ್ರಮ ಮದ್ಯ ಶೇಖರಣೆ, ಸಾಗಾಣಿಕೆ, ಮಾರಾಟದ ಬಗ್ಗೆ ದೂರುಗಳಿದಲ್ಲಿ ಚಿಕ್ಕಮಗಳೂರು ತಾಲೂಕಿನ 08262-221269, 229029, ಕಡೂರು- 08267-214746, ತರೀಕೆರೆ- 08261-223970, ಮೂಡಿಗೆರೆ- 08263-222075, ಕೊಪ್ಪ- 08265-222628 ಹಾಗೂ ಎನ್.ಆರ್.ಪುರ- 08266-220439 ಕಂಟ್ರೋಲ್ ರೂಂಗೆ ಮಾಹಿತಿ ನೀಡಲು ಅಬಕಾರಿ ಇಲಾಖೆ ಕೋರಿದೆ.

ಅಧಿಕಾರಿಗಳ ಪ್ರವಾಸ

ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಮತ್ತು ನಿರೀಕ್ಷಕರು  ಮಾ. 25 ಹಾಗೂ 26 ರಂದು ಜಿಲ್ಲೆಯ ವಿವಿಧೆಡೆ ಭೇಟಿ ನೀಡಲಿದ್ದಾರೆ. ಮಾ25ರಂದು ಶೃಂಗೇರಿಯ ಪ್ರವಾಸಿ ಮಂದಿರದಲ್ಲಿ, ಬೆಳಿಗ್ಗೆ 10.30ಕ್ಕೆ, ಮಧ್ಯಾಹ್ನ 3ಕ್ಕೆ ಕೊಪ್ಪ ಪ್ರವಾಸಿ ಮಂದಿರದಲ್ಲಿ, ಹಾಗೂ ಮಾ.26ರಂದು ನರಸಿಂಹರಾಜಪುರ ಪ್ರವಾಸಿ ಮಂದಿರಗಳಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸಗಳ ನಿಮಿತ್ತ ಅರ್ಜಿ, ದೂರು ಸಲ್ಲಿಸಿದ್ದು, ಸಂಬಂಧಪಟ್ಟ ಅಧಿಕಾರಿಯು ವಿಲೇವಾರಿ ಮಾಡದೆ, ಸಮಸ್ಯೆಯನ್ನು ಬಗೆಹರಿಸದೆ ಇದ್ದಲ್ಲಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿರುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.