ಮೊಬೈಲ್ ಟವರ್ ನಿರ್ಮಾಣಕ್ಕೆ ಸ್ಥಳೀಯರ ವಿರೋಧ
ಕ.ಪ್ರ.ವಾರ್ತೆ, ಕೊಪ್ಪ, ಮಾ 24
ಪಟ್ಟಣದ ಇಂದಿರಾನಗರ ಬಡಾವಣೆಯಲ್ಲಿ ಮೊಬೈಲ್ ಟವರ್ ನಿರ್ಮಿಸಲು ಸಿದ್ಧತೆ ನಡೆಸುತ್ತಿರುವುದನ್ನು ತಕ್ಷಣದಲ್ಲಿ ತಡೆಯುವಂತೆ ಬಡಾವಣೆಯ ನಿವಾಸಿಗಳು ತಹಸೀಲ್ದಾರ್ ಲಿಂಗಪ್ಪ ಗೌಡರಿಗೆ ಮನವಿ ನೀಡಿದರು.
ಈಗಾಗಲೇ ಇಂದಿರಾನಗರದ ಬಡವಾಣೆಯಲ್ಲಿ ಮೊಬೈಲ್ ಟವರ್ ನಿರ್ಮಾಣವಾಗಿದ್ದು, ಈ ಟವರ್,ನಿಂದ ಪ್ರಸಾರವಾಗುವ ಕಿರಣಗಳಿಂದ ಆರೋಗ್ಯಕ್ಕೆ ಹಾನಿಯಾಗುತ್ತಿರುವುದಲ್ಲದೇ, ಇದರ ಪಕ್ಕದಲ್ಲಿ ವಾಸ ಮಾಡುತ್ತಿರುವವರಿಗೆ ಟವರ್,ಗೆ ಬಳಸುವ ಜನರೇಟರ್ ಶಬ್ದದಿಂದ ತೊಂದರೆಯಾಗುತ್ತಿದೆ ಎಂದರು. ಇತ್ತೀಚೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಟವರ್ ನಿರ್ಮಾಣದ ಬಗ್ಗೆ ಕಠಿಣ ನಿಲುವು ತೆಗೆದುಕೊಂಡಿದ್ದು, ಈ ನಿಯಮಾವಳಿಯಂತೆ ಜನನಿಬಿಡ ಪ್ರದೇಶದಲ್ಲಿ ಹೆಚ್ಚು ಟವರ್ ನಿರ್ಮಿಸಲು ಅವಕಾಶ ಇರುವುದಿಲ್ಲವೆಂದು ತಿಳಿದುಬಂದಿದೆ. ಹೊಸ ಟವರ್ ನಿರ್ಮಿಸದಂತೆ ಸಂಬಂಧಿಸಿದರವರಿಗೆ ತಕ್ಷಣ ನಿರ್ದೇಶನ ನೀಡುವಂತೆ ಒತ್ತಾಯಿಸಿದರು. ಈ ಸಮಯದಲ್ಲಿ ನಿವಾಸಿಗಳಾದ ಪತ್ರಕರ್ತ ಶೇಷಾದ್ರಿ, ಸುಬ್ಬಣ,, ನಾಗರಾಜ್ ಮೊದಲಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

