ಹೈನುಗಾರಿಕೆಯಿಂದ ರೈತರ ಬದುಕು ಹಸನು
ಕ.ಪ್ರ ವಾರ್ತೆ , ಚಿಕ್ಕಮಗಳೂರು , ಮಾ. 24
ಗ್ರಾಮಾಂತರ ಪ್ರದೇಶಗಳಲ್ಲಿ ಕೃಷಿ ಕ್ಷೇತ್ರಕ್ಕೆ ಮೊದಲ ಆದ್ಯತೆ ಇದ್ದರೆ, ಎರಡನೇ ಆದ್ಯತೆ ಹೈನುಗಾರಿಕೆಗೆ. ಇದು ರೈತರ ಬದುಕನ್ನು ಹಸನಾಗಿಸಿದೆ ಎಂದು ಗೋಕುಲ್ ಡೇರಿಯ ವ್ಯವಸ್ಥಾಪಕ ಪಾಲುದಾರರಾದ ಕೆ.ಎಂ. ಕೃಷ,ಮೂರ್ತಿ ಹೇಳಿದ್ದಾರೆ.
ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗೋಕುಲ್ ಡೇರಿ ಪ್ರಾಜೆಕ್ಟ್,ನ ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ಕೆಲಸ ಗೋಕುಲ್ ಡೇರಿ ಮಾಡುತ್ತಿದೆ ಎಂದರು.
ನಿಮ್ಮ ಹಳ್ಳಿಯಿಂದ ನಿಮ್ಮ ಮನೆ ಬಾಗಿಲಿಗೆ ಎಂಬ ರೀತಿಯಲ್ಲಿ ಗೋಕುಲ್ ಡೇರಿ ಕಳೆದ 15 ವರ್ಷಗಳಿಂದ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಇಂದು ಹಾಲು, ಪನ್ನೀರ್ ಕೋವ, ತುಪ್ಪ ಹಾಗೂ ಇತರೆ ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದು, ಮತ್ತಷ್ಟು ಹೆಚ್ಚಿನ ವಹಿವಾಟು ಮಾಡಿ ಹಾಲು ಉತ್ಪಾದಕರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಚಿತ್ರದುರ್ಗ, ಬೆಂಗಳೂರು, ಮೈಸೂರು, ಕೋಲಾರ, ಶಿವಮೊಗ್ಗ, ಹಾಸನ, ಹೊಸಪೇಟೆ ಹಾಗೂ ಇತರೆ ಜಿಲ್ಲೆಗಳಲ್ಲಿ ಮಾರುಕಟ್ಟೆಯನ್ನು ಹೊಂದಿದ್ದು, ಚಿಕ್ಕಮಗಳೂರು ನಗರದಲ್ಲೂ ಸಹ ಉತ್ತಮ ವಹಿವಾಟು ನಡೆಸುತ್ತಿದೆ. ಆರೋಗ್ಯ ಮತ್ತು ಶುಚಿತ್ವಕ್ಕೆ ಮಹತ್ವ ನೀಡಿ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಐ.ಎಸ್.ಓ. ಮಾರ್ಕ್ ಕೂಡ ಪಡೆದಿದೆ ಎಂದರು.
ಈ ಸಂದರ್ಭದಲ್ಲಿ ಜಿ.ಎಂ. ಚೇತನ್ ಕುಮಾರ್, ರಾಮಚಂದ್ರ ರಾಜ್, ವಸಂತ್ ಹಾಗೂ ಹಾಲಿನ ಡೈರಿಯ ಸಿಬ್ಬಂದಿ ವರ್ಗ ಮತ್ತು ಏಜೆಂಟರುಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

