ಆದರ್ಶ ಪುರಷರ ಮಾರ್ಗದರ್ಶನದಲ್ಲಿ ನಡೆಯಿರಿ
ಕ.ಪ್ರ. ವಾರ್ತ,ನ.ರಾ.ಪುರ, ಮಾ.24
ಮಾಧ್ಯಮ ಕ್ಷೇತ್ರದಲ್ಲಿರುವ ಆದರ್ಶ ಪತ್ರಕರ್ತರ ಮಾರ್ಗದರ್ಶನದಲ್ಲಿ ಕಿರಿಯ ಪತ್ರಕರ್ತರು ಮುನ್ನಡೆಯಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರ ಸೋಮೇಶ್ವರ ಶಿವಾಚಾರ್ಯ ಶ್ರೀ ಹೇಳಿದರು.
ಅವರು ಭಾನುವಾರ ಮಾಧ್ಯಮ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಜಿಲ್ಲಾ ಪ್ರಥಮ ಮಾಧ್ಯಮ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಬೆಂಗಳೂರಿನ ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಪತ್ರಿಕೋದ್ಯಮ ಇಂದು ತಾಂತ್ರಿಕವಾಗಿ ಮುಂದುವರಿದಿದ್ದರೂ, ನೈತಿಕವಾಗಿ ಕುಸಿದಿದೆ. ನೈತಿಕ ನೆಲೆಗಟ್ಟಿನಲ್ಲಿ ಪತ್ರಕರ್ತರು ವೃತ್ತಿಪರತೆ ಉಳಿಸಿಕೊಳ್ಳಬೇಕು ಎಂದರು.
ಜಾಗತೀಕರಣದ ಪ್ರಭಾವ: ಪತ್ರಕರ್ತ ಈಶ್ವರ ದೈತೋಟ ಮಾತನಾಡಿದರು.
ಸಮ್ಮೇಳಾಧ್ಯಕ್ಷ ಸ. ಗಿರಿಜಾ ಶಂಕರ ಅಧ್ಯಕ್ಷೀಯ ಭಾಷಣ ಮಾಡಿದರು. ಪತ್ರಕರ್ತ ಬಾಲಕೃಷ, ಪುತ್ತಿಗೆ ಅವರಿಗೆ ಚಿಕ್ಕೊಳಲೆ ಸದಾಶಿವಶಾಸ್ತ್ರಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಕಾರ್ಯದರ್ಶಿ ಎನ್. ಭೃಂಗೀಶ್ ಪ್ರದಾನ ಮಾಡಿದರು.
ಹಣ,ೆ ಮಠದ ಶಿವಾನಂದ ಶಿವಾಚಾರ್ಯ ಶ್ರೀ, ಜಿಲ್ಲಾ ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷೆ ಗೌರಮ್ಮ ಬಸವೇಗೌಡರು, ಪತ್ರಕರ್ತ ಎಸ್. ಶಾಂತರಾಮ್ ಉಪಸ್ಥಿತರಿದ್ದರು. ಜಿಲ್ಲಾ ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಪ್ರಭುಲಿಂಗಶಾಸ್ತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಮಿತ್ರ ಮತ್ತು ತಂಡದವರು ಪ್ರಾರ್ಥಿಸಿದರು. ಸಿ. ಸುರೇಶ್ ಸ್ವಾಗತಿಸಿದರು. ಎಚ್.ಎಸ್. ಪುಟ್ಟಸ್ವಾಮಿ ನಿರೂಪಿಸಿದರು.
ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದ ಜಿಲ್ಲಾ ಪ್ರಥಮ ಮಾಧ್ಯಮ ಸಮ್ಮೇಳನ ಕಾರ್ಯಕ್ರಮವನ್ನು ಬೆಂಗಳೂರಿನ ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಉದ್ಘಾಟಿಸಿದರು. ಬಾಳೆಹೊನ್ನೂರಿನ ರಂಭಾಪುರಿ ಶ್ರೀ, ಸಮ್ಮೇಳಾಧ್ಯಕ್ಷ ಸ. ಗಿರಿಜಾಶಂಕರ್ ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

