ಚಿಕ್ಕಮಗಳೂರು

ಸ್ವಯಂಪ್ರೇರಿತ ರಕ್ತದಾನ ಶಿಬಿರ

Published On :

ಕ.ಪ್ರ. ವಾರ್ತೆ, ಶಿವಮೊಗ್ಗ, ಮಾ.24
ರಜಾ ದಿನಗಳಲ್ಲಿ ಮೋಜು ಮಸ್ತಿಗಳನ್ನು ನಿರಾಕರಿಸಿ, ಯುವಕರು ರಕ್ತದಾನದಂತಹ ಮಹತ್ತರ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಶ್ಲಾಘನೀಯ ಎಂದು ನಗರಸಭಾ ಸದಸ್ಯ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಸಿ. ಯೋಗೀಶ್ ತಿಳಿಸಿದರು.
    ಭದ್ರಾವತಿ ತಾಲೂಕಿನ ಕನಸಿನಕಟ್ಟೆ ಗ್ರಾಮದಲ್ಲಿ ಯುವ ಕಾಂಗ್ರೆಸ್ ಸಮಿತಿ, ಆಧಾರ ರಕ್ತದಾನಿ ಸೇವಾ ಟ್ರಸ್ಟ್ ಹಾಗೂ ಜಿಲ್ಲಾ ಮೆಗ್ಗಾನ್ ರಕ್ತನಿಧಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ರಕ್ತ ಗುಂಪು ತಪಾಸಣೆ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸದುಪಯೋಗವಾಗಲಿ: ಆಧಾರ ಸಂಸ್ಥೆಯಿಂದ ಹಳ್ಳಿಗಳಲ್ಲಿ ರಕ್ತದ ಬಗ್ಗೆ ಜನರಿಗೆ ಸಲಹೆ ನೀಡುವ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು, ಇದರ ಸದುಪಯೋಗವನ್ನು ಹಳ್ಳಿಯ ಜನರು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
  ಇತ್ತೀಚಿನ ದಿನಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು, ಯುವಕರು ಪ್ರತಿ 3 ತಿಂಗಳಿಗೊಮ್ಮೆ ರಕ್ತದಾನ ಮಾಡಿದ್ದಲ್ಲಿ ರಕ್ತದ ಕೊರತೆಯನ್ನು ನೀಗಿಸಬಹುದು ಎಂದು ಯುವಕರಿಗೆ ಹೇಳಿದರು.
    ಜಿಲ್ಲಾ ಮೆಗ್ಗಾನ್ ರಕ್ತನಿಧಿ ವೈದ್ಯಾಧಿಕಾರಿ ಡಾ. ಅಶೋಕ್ ಅವರು ರಕ್ತದಾನ ಮಹತ್ವ ಕುರಿತು ವಿವರಣೆ ನೀಡಿದರು. ನಂತರ ಆಧಾರ ಟ್ರಸ್ಟ್ ಸದಸ್ಯರಿಂದ ರಂಗೇನಹಳ್ಳಿ ಮಂಜು ನಿರ್ದೇಶನದ ಮಾಡ್ಲೇ ಬೇಕು ರಕ್ತದಾನ ನಾಟಕ ಹಾಗೂ ಗ್ರಾಮದಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸುಮಾರು 30 ಯುವಕರು ರಕ್ತದಾನ ಮಾಡಿದರು.
ಅಧ್ಯಕ್ಷತೆಯನ್ನು ಗ್ರಾಮಾಂತರ ವಿಧಾನಸಭಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಆರ್. ಸೀತಾರಾಂ ವಹಿಸಿದ್ದರು. ಇದೇ ಸಂದರ್ಭದಲ್ಲಿ ಆಧಾರ ರಕ್ತದಾನಿ ಸೇವಾ ಟ್ರಸ್ಟ್,ನ ಉಪಾಧ್ಯಕ್ಷ ಆರ್. ಮಂಜುನಾಥ್, ಗ್ರಾ.ಪಂ. ಸದಸ್ಯರಾದ ಶ್ರೀನಿವಾಸ್, ಲಕ್ಷ್ಮಿ ನಾಗರಾಜ್, ಸಿ. ಹನುಮಂತು ಸೇರಿದಂತೆ ಇತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.