ಬಾಬಾಬುಡನ್ ಗುಹೆ, ಪಾದುಕೆ ದರ್ಶನಕ್ಕೆ ಅವಕಾಶ
ಚಿಕ್ಕಮಗಳೂರು: ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಮಾ.27ರಿಂದ 29ರವರೆಗೆ ಉರುಸ್ ನಡೆಯಲಿದ್ದು ಭಕ್ತಾಧಿಗಳಿಗೆ ಗುಹೆ ಮತ್ತು ಪಾದುಕೆ ದರ್ಶನಕ್ಕೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.
2008ರ ಡಿ.1ರಂದು ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಧಾರ್ಮಿಕ ದತ್ತಿ ಆಯುಕ್ತರ 25-2-1989ರ ಆದೇಶದಲ್ಲಿ ಕ್ರೋಢೀಕರಿಸಿರುವ ಧಾರ್ಮಿಕ ವಿಧಾನಗಳನ್ನು ನಡೆಸಲು ಮಾತ್ರ ಅವಕಾಶವಿದೆ.
ಭಕ್ತಾಧಿಗಳಿಗೆ ಕುಡಿಯುವ ನೀರು, ಶೆಡ್, ಪ್ರಸಾದ ವ್ಯವಸ್ಥೆ, ಶೌಚಾಲಯ, ವೈದ್ಯಕೀಯ ಸೇವೆ ಮತ್ತು ವಿಶೇಷ ಬಸ್ ಸೌಲಭ್ಯ ಮತ್ತಿತರ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ.
ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಭಕ್ತರನ್ನು ಕೊಂಡೊಯ್ಯುವ ವಾಹನ ಚಾಲಕರು ಅತಿ ಎಚ್ಚರಿಕೆಯಿಂದ ವಾಹನಗಳನ್ನು ಚಾಲನೆ ಮಾಡಬೇಕು. ಮಾ.29ರಂದು ನಡೆಯುವ ಉರುಸ್ ಕಾರ್ಯಕ್ರಮಕ್ಕೆ ಭಕ್ತಾಧಿಗಳು ಕ್ಯಾಮರಾ, ವೀಡಿಯೋ, ಮೊಬೈಲ್‌ಗಳನ್ನು ತರುವುದು ಮತ್ತು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ.
ಕಾನೂನು ಸುವ್ಯವಸ್ಥೆ, ಶಾಂತಿಪಾಲನೆ ದೃಷ್ಟಿಯಿಂದ, ಧಾರ್ಮಿಕ ಕಾರ್ಯಕ್ರಮ ಸುಗಮವಾಗಿ ಜರುಗಲು ಭಕ್ತಾದಿಗಳು ಸಹಕರಿಸಬೇಕು ಎಂದು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

