ರೈತಪರ ಸಂಘಟನೆಗಳಿಂದ ಧರಣಿ ಸತ್ಯಾಗ್ರಹ
ಕ.ಪ್ರ.ವಾರ್ತೆ ಶೃಂಗೇರಿ ಮಾ.25
ತಾಲೂಕು ರೈತ ಸಂಘ, ಹಸಿರು ಸೇನೆ ಸೇರಿದಂತೆ ರೈತಪರ ಸಂಘಟನೆಗಳು ಸೋಮವಾರ ಪಟ್ಟಣದ ತಾಲೂಕು ಕಚೇರಿ ಮುಂಭಾಗ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹವನ್ನು ನಡೆಸಿತು.
ಗೋರಖ್ ಸಿಂಗ್ ವರದಿಯನ್ನು ಯಥಾವತ್ತಾಗಿ ಅನುಷಷ್ಠಾನಗೊಳಿಸಬೇಕು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಬಡ್ಡಿ ರಹಿತ ಸಾಲ ನೀಡಬೇಕು ಎಂದು ಒತ್ತಾಯಿಸಿದರು. ಪರ್ಯಾಯ ಬೆಳೆಗೆ ಪ್ರೋತ್ಸಾಹ ನೀಡಬೇಕು, ಬ್ಯಾಂಕುಗಳು ಕಡ್ಡಾಯ ಸಾಲ ವಸೂಲಾತಿ ನಿಲ್ಲಿಸಬೇಕು. ರೈತರ ಮೇಲೆ ನ್ಯಾಯಾಲಯಗಳು ಹೂಡಿರುವ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು, ಶೃಂಗೇರಿಯಲ್ಲಿ ಬತ್ತ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.
ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು, ಹಳದಿ ಎಲೆ ರೋಗ ಪೀಡಿತ ತೋಟಗಳ ರೈತರಿಗೆ ಪರಿಹಾರ ನೀಡಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿ ನಡೆಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಬಿ.ಎಸ್. ಶ್ರೀಧರ್ ರಾವ್, ಕಾರ್ಯದರ್ಶಿ ಕಾನುವಳ್ಳಿ ಚಂದ್ರಶೇಖರ್ ರಾವ್, ಕೆಳವಳ್ಳಿ ಗುಂಡಪ್ಪ, ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

