ಕಾಂಗ್ರೆಸ್ ಗೆಲ್ಲಿಸಲು ಸಂಕಲ್ಪ ಮಾಡಿ
ಕ.ಪ್ರ.ವಾರ್ತೆ, ತರೀಕೆರೆ, ಮಾ.26 ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ ಅನ್ವರ್ ಹೇಳಿದರು.
ಅವರು ಮಂಗಳವಾರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರು, ಬೂತ್ ಅಧ್ಯಕ್ಷರು ಮತ್ತು ಗ್ರಾಪಂ ಅಧ್ಯಕ್ಷರುಗಳಿಗಾಗಿ ಏರ್ಪಡಿಸಲಾಗಿದ್ದ ವಿಧಾನ ಸಭಾ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮನ ಒಲಿಸಿಕೊಳ್ಳಿ: ಬರಲಿರುವ ವಿಧಾನಸಭಾ ಚುನಾವಣೆಗಾಗಿ ಪಕ್ಷದ ವರಿಷ್ಠರು ಯಾರನ್ನೇ ಅಭ್ಯರ್ಥಿಯನ್ನಾಗಿ ಪ್ರಕಟಿಸಲಿ, ಪಕ್ಷವನ್ನು ಗೆಲ್ಲಿಸುವತ್ತ ಎಲ್ಲರೂ ಸಂಕಲ್ಪ ಮಾಡಬೇಕು. ಚುನಾವಣೆ ತಂತ್ರ ರೂಪಿಸಬೇಕು. ಮತಗಟ್ಟೆಗಳಲ್ಲಿ ಬೂತ್ ಅಧ್ಯಕ್ಷರು ಪ್ರಮುಖ ಪಾತ್ರ ವಹಿಸಬೇಕು ಎಂದರು.
ತಾಲೂಕಿನಲ್ಲಿ ಎಲ್ಲ ಬೂತ್ಗಳಲ್ಲೂ ಮಹಿಳೆಯರನ್ನು ಒಳಗೊಂಡ 10 ಜನರ ಒಂದು ಸಮಿತಿ ರಚಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಗೆಲವು ಖಚಿತ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ಸಮೀಉಲ್ಲಾ ಷರೀಫ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುಕೂಲವಿದೆ. ಈ ಸಾರಿ ಕಾಂಗ್ರೆಸ್ ಗೆಲವು ಖಂಡಿತ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಗೆಲವಿಗೆ ಶ್ರಮಿಸೋಣ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಖಚಾಂಚಿ ಬಿ.ಎಸ್.ಆರ್. ಮಂಜುನಾಥ್ ಮಾತನಾಡಿ, ಹೊಸ ತಂತ್ರಗಾರಿಕೆಯಿಂದ ಚುನಾವಣಾ ಪ್ರಚಾರ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗೋಣ. ಪಕ್ಷದಲ್ಲಿ ಕಾರ್ಯಕರ್ತರೇ ಬಹಳ ಪ್ರಮುಖ. ಪಕ್ಷವನ್ನು ಗೆಲ್ಲಿಸಲು ಹೋರಾಟ ಮಾಡೋಣ. ಎಲ್ಪರೂ ಸಲಹೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ಪುರಸಭಾ ಸದಸ್ಯ ಟಿ.ಎಸ್.ರಮೇಶ್, ಪರ್ವೀನ್ ತಾಜ್, ಮಾಜಿ ಪುರಸಭಾಧ್ಯಕ್ಷೆ ಹೇಮಲತಾ ರೇವಣ್ಣ, ಗುರುಮೂರ್ತಿ, ಮಲ್ಲಿಕಾರ್ಜುನಪ್ಪ, ರಾಜು, ಮಿರ್ಜಾ ಇಸ್ಮಾಯಿಲ್, ಅಮ್ಜದ್, ರಾಜಾರಾವ್, ರಾಮಲಿಂಗಂ ಮೊದಲಾದವರು ಮಾತನಾಡಿದರು.
ಪುರಸಭಾ ಸದಸ್ಯರು, ಮಹೇಶ್, ಪಕ್ಷದ ಕಾರ್ಯಕರ್ತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಪುರಸಭಾ ಸದಸ್ಯ ಟಿ.ಎಸ್.ರಮೇಶ್ ಅವರು ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

