ಚಿಕ್ಕಮಗಳೂರು

ಬಸವರಾಜು ಪ್ರವಾಸ

Published On :

ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಬಸವರಾಜು ಅವರು ಮಾರ್ಚ್ 27 ರಂದು ಸಂಜೆ 4 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸುವರು.
ಸಂಜೆ ನಗರದ ಕುವೆಂಪು ರಂಗಮಂದಿರದಲ್ಲಿ ರಂಗಾಯಣ ಶಿವಮೊಗ್ಗ ಘಟಕದ ವತಿಯಿಂದ ನಡೆಯಲಿರುವ ರಂಗಶತಕ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 10 ಗಂಟೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಹಿಂದಿರುಗುವರು.
ರಂಗ ಶತಕ ಸಮಾರೋಪ
ಶಿವಮೊಗ್ಗ: ಕಲಾವಿದರ ಒಕ್ಕೂಟ ಮತ್ತು ರಂಗಾಯಣ ಶಿವಮೊಗ್ಗ ಘಟಕವು ಮಾರ್ಚ್ 27 ರಂದು ಸಂಜೆ 6 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ವಿಶ್ವರಂಗಭೂಮಿ ದಿನಾಚರಣೆ ರಂಗಶತಕ ಸಮಾರೋಪ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಬಸವರಾಜು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಕಲಾವಿದರ ಒಕ್ಕೂಟದ ಅಧ್ಯಕ್ಷ ಪ್ರೊ. ಗೌರಿಶಂಕರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್. ಹರಿಕುಮಾರ್ ಉಪಸ್ಥಿತರಿರುವರು. ರಂಗಾಯಣ ಶಿವಮೊಗ್ಗ ಘಟಕದ ಅಧ್ಯಕ್ಷ ಹೊ.ನ. ಸತ್ಯ ಅಧ್ಯಕ್ಷತೆ ವಹಿಸುವರು.
ಏ.5ರಂದು ಶ್ರೀಗಳ ಪುರಪ್ರವೇಶ ಉತ್ಸವ
ಶೃಂಗೇರಿ: ಇಲ್ಲಿನ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥರು ಧರ್ಮ ದಿಗ್ವಿಜಯಯಾತ್ರೆ ಮುಗಿಸಿ ಏಪ್ರಿಲ್ 5ರಂದು ಪುರಪ್ರವೇಶ ಮಾಡಲಿರುವ ಹಿನ್ನೆಲೆಯಲ್ಲಿ ಅಂದು ಸಂಭ್ರಮಾಚಾರಣೆಯೊಂದಿಗೆ ಸ್ವಾಗತ ನೀಡಲು ಭಕ್ತಾದಿಗಳು ನಿರ್ಧರಿಸಿದ್ದಾರೆ. ಬ್ರಹ್ಮರಥದಲ್ಲಿ ಶ್ರೀಗಳನ್ನು ಕುಳ್ಳಿರಿಸಿ ಸ್ವಾಗತಿಸಲಾಗುವುದು. ಜಾನಪದ ಕಲಾ ತಂಡಗಳು, ಆಕರ್ಷಕ ಸ್ಥಬ್ದ ಚಿತ್ರಗಳು, ಕಲಾ ಪ್ರದರ್ಶನಗಳು ಉತ್ಸವಕ್ಕೆ ಮೆರಗು ನೀಡಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.