ಶ್ರೀನಿವಾಸಮೂರ್ತಿಗೆ ಶ್ರಮಜೀವಿ ಪ್ರಶಸ್ತಿ
ತರೀಕರೆ: ಕರ್ನಾಟಕ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಉಡುಪಿ ವತಿಯಿಂದ ಉಡುಪಿಯ ಅಮ್ಣಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಏರ್ಪಾಡಾಗಿದ್ದ ಕರ್ನಾಟಕ ರಾಜ್ಯ ಚಿತ್ರಕಲಾ ಶಿಕ್ಷಕರ 9ನೇ ಮಹಾ ಶೈಕ್ಷಣಿಕ ಸಮ್ಮೇಳನದಲ್ಲಿ ತರೀಕೆರೆ ಸಮೀಪದ ಲಕ್ಕವಳ್ಳಿ ಗ್ರಾಮಜ್ಯೋತಿ ಪ್ರೌಢಶಾಲೆ ಶಿಕ್ಷಕ ಕೆ.ಜಿ.ಶ್ರೀನಿವಾಸಮೂರ್ತಿ ಅವರಿಗೆ ಶ್ರಮಜೀವಿ ಪ್ರಶಸ್ತಿ ಮತ್ತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಶಿಕ್ಷಕ ಕೆ.ಜಿ.ಶ್ರೀನಿವಾಸಮೂರ್ತಿ ಅವರು ಚಿತ್ರಕಲಾ ಶಿಕ್ಷಕರಾಗಿ ಡ್ರಾಯಿಂಗ್ ಗ್ರೇಡ್ ಪರೀಕ್ಷಾ ಕೇಂದ್ರದಲ್ಲಿ ಹೆಚ್ಚು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ತಯಾರುಗೊಳಿಸಿದ್ದಕ್ಕಾಗಿ ಶ್ರಮಜೀವಿ ಪ್ರಶಸ್ತಿ, ಮತ್ತು
ಶಾಲೆಯಲ್ಲಿ ಶಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವುದಕ್ಕಾಗಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಶಾಲು ಹೊದಿಸಿ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಲಕ್ಕವಳ್ಳಿ ಗ್ರಾಮಜ್ಯೋತಿ ವಿದ್ಯಾಸಂಸ್ಥೆ, ಗ್ರಾಮಜ್ಯೋತಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಅಭಿನಂದಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

