ಚಿಕ್ಕಮಗಳೂರು

23ರ ವರೆಗೆ ಸೇನಾ ನೇಮಕಾತಿ ರ್ಯಾಲಿ

Published On :

ಚಿಕ್ಕಮಗಳೂರು: ಭಾರತೀಯ ಭೂ ಸೇನೆಯ ವಿವಿಧ ಹುದ್ದೆಗಳ ನೇಮಕಾತಿ ರ್ಯಾಲಿ ಏಪ್ರಿಲ್ 16 ರಿಂದ 23 ರವರೆಗೆ ಚಿಕ್ಕಮಗಳೂರಿನ ಜ್ಯೋತಿನಗರದ ಶತಮಾನೋತ್ಸವ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸೋಲ್ಜರ್ ಜನರಲ್ ಡ್ಯೂಟಿ, ಟೆಕ್ನಿಕಲ್, ಕ್ಲರಿಕಲ್, ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ ಮತ್ತು ತಾಂತ್ರಿಕ ವಿದ್ಯಾರ್ಹತೆ ಹೊಂದಿದ 17 ರಿಂದ 23 ವರ್ಷದೊಳಗಿನವರು ರ್ಯಾಲಿಯಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಹಾಸನ  ಇವರನ್ನು ಸಂಪರ್ಕಿಸಲು ತಿಳಿಸಿದೆ.
ಕೊನೆ ಅವಕಾಶ
ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ಕಾಲೇಜ್‌ನಲ್ಲಿ 2012-13 ಕ್ಕೂ ಮೊದಲು ಪ್ರವೇಶ ಪಡೆದ ನಾನ್ ಸೆಮಿಸ್ಟರ್ ಸ್ಕೀಂ ಹಾಗೂ ಮತ್ತು 2003-04 ಹಾಗೂ ನಂತರ ಪ್ರವೇಶ ಪಡೆದ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 2013ರ ಮೇ- ಜೂನ್ ನಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯುವ ಅಂತಿಮ ಅವಕಾಶ ಕಲ್ಪಿಸಲಾಗಿದೆ.
ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎಂ, ಬಿ.ಸಿ.ಎ, ಪದವಿಯ ಅನುತ್ತೀರ್ಣರಾದ ವಿಷಯಗಳ ಪರೀಕ್ಷೆ ಬರೆಯಬಹುದಾಗಿದ್ದು, 2002 ನೇ ಸಾಲಿನಲ್ಲಿ ಚಾಲ್ತಿಯಲ್ಲಿದ್ದ ಪಠ್ಯಕ್ರಮವನ್ನು ಹಾಗೂ 2003- 04 ಹಾಗೂ ನಂತರದವರು ತಾವು ಅಭ್ಯಾಸ ಮಾಡಿದ ಆಯಾ ಸೆಮಿಸ್ಟರ್ ಪಠ್ಯಕ್ರಮದಂತೆ ಅಭ್ಯಾಸ ಮಾಡಿ ಪರೀಕ್ಷೆ ಬರೆಯಬಹುದಾಗಿದೆ. ವಿದ್ಯಾರ್ಥಿಗಳು ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಕಾಲೇಜಿನಲ್ಲಿ ಮಾಹಿತಿ ಪಡೆಯಬಹುದೆಂದು ಕುವೆಂಪು ವಿಶ್ವವಿದ್ಯಾನಿಲಯ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.