ಇಂದು ಸರ್ಕಾರಿ ನೌಕರರ ಕ್ರೀಡಾಕೂಟ
ಚಿಕ್ಕಮಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಚಿಕ್ಕಮಗಳೂರು ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಮಾ. 27 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ವಿ. ಯಶವಂತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಮಂಜುನಾಥಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್, ಕರ್ನಾಟಕ ರಾಜ್ಯ ನೌಕರರ ಸಂಘ ವಿಭಾಗೀಯ ಉಪಾಧ್ಯಕ್ಷ ಕೆ.ಎ. ಗೋಪಾಲಕೃಷ್ಣ, ಕಾರ್ಯದರ್ಶಿ ಎಂ.ಎಸ್. ಹೇಮಂತ್ ಕುಮಾರ್ ಭಾಗವಹಿಸಲಿದ್ದಾರೆ.
ವಿಶ್ವ ರಂಗಭೂಮಿ ದಿನಾಚಾರಣೆ ಇಂದು
ಶೃಂಗೇರಿ: ಶ್ರೀ ಭಾರತೀ ತೀರ್ಥ ಕಲ್ಚರಲ್ ಟ್ರಸ್ಟ್ ಮತ್ತು ಜಾನಪದ ಅಧ್ಯಯನ ಕೇಂದ್ರ ಟ್ರಸ್ಟ್ ಹಾಗೂ ಕಾಳಿಂಗ ನಾವಡ ಸಾಂಸ್ಕೃತಿಕ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಪಟ್ಟಣದ ಗೌರೀಶಂಕರ ಸಭಾಂಗಣದಲ್ಲಿ ವಿಶ್ವ ರಂಗಭೂಮಿ ದಿನಾಚಾರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜಾನಪದ ಕಲಾವಿದ, ರಂಗನಟ ಯಡದಾಳು ಸುರೇಂದ್ರ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಶೈಲಜಾ ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅರಮನೆ ಕಥಾ ಪ್ರಸಂಗ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

