ಚಿಕ್ಕಮಗಳೂರು

ಕಾಯಿಲೆಗೆ ಮುನ್ನವೇ ಜಾಗ್ರತೆ ವಹಿಸಿ

Published On :

ಕ.ಪ್ರ.ವಾರ್ತೆ, ಕಡೂರು, ಮಾ.27 ಕಡೂರು ಮನುಷ್ಯನಿಗೆ ಯಾವುದೇ ಕಾಯಿಲೆ ಉಲ್ಬಣವಾಗುವುದಕ್ಕಿಂತ ಮೊದಲೇ ಮೊದಲೇ ಜಾಗ್ರತೆ ವಹಿಸಿ ವಹಿಸುವುದರಿಂದ ರೋಗ ನಿಯಂತ್ರಣಕ್ಕೆ ಬರುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಕಡೂರು ಯಳನಡು ಮಠದ ಜ್ಞಾನಪ್ರಭು ಸಿದ್ದರಾಮ ದೇಶೀಕೇಂದ್ರ ಸ್ವಾಮಿಜಿ ಹೇಳಿದರು.
ಅವರು ಕಡೂರು ಪಟ್ಟಣದ ಆಯುಷ್ ಇಲಾಖೆಯ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಉಚಿತ ಮಧುಮೇಹ ಪರೀಕ್ಷೆ ಮತ್ತು ಚಿಕಿತ್ಸೆ ಬಗ್ಗೆ ಏರ್ಪಡಿಸಿದ್ದ ಶಿಬಿರದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.     
ಆರೋಗ್ಯದ ಮೇಲೆ ದುಷ್ಪರಿಣಾಮ: ರಾಸಾಯನಿಕ ಮಿಶ್ರಣಗಳಿಂದ ತಯಾರಿಸಲಾದ ತಂಪು ಪಾನೀಯಗಳನ್ನು ಜನರು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಈ ಬಗ್ಗೆ ಜನರು ಜಾಗ್ರತೆ ವಹಿಸಿ ಪ್ರಕೃತಿದತ್ತವಾಗಿ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗುವ ಎಳನೀರಿನಂತಹ ಪಾನೀಯಗಳನ್ನು ಸೇವಿಸಬೇಕು ಎಂದರು.
ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಿ ನೈಸರ್ಗಿಕವಾಗಿ ದೊರಕುವ ವಸ್ತುಗಳ ಉಪಯೋಗದಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿ ಜನರು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ರೋಗಕ್ಕೆ ಆಹ್ವಾನ: ವೈದ್ಯ ಡಾ. ಅನೂಪ್ ಮಾತನಾಡಿ, ಒತ್ತಡ, ವ್ಯಾಯಾಮ ರಹಿತ ಜೀವನ ಮಧುಮೇಹಕ್ಕೆ ಆಹ್ವಾನ ನೀಡಿದಂತೆ. ಸರಿಯಾದ ಆಹಾರ ಪದ್ಧತಿ ಅನುಸರಿಸದೇ ಹೋದಲ್ಲಿ ಅನಾರೋಗ್ಯಕ್ಕೆ ತುತ್ತಾಗಲು ಕಾರಣವಾಗುತ್ತದೆ ಎಂದು ಎಚ್ಚರಿಸಿದರು.
ಭಾರತದಲ್ಲಿ ಈಗಾಗಾಲೇ 50 ಮಿಲಿಯನ್‌ಗಿಂತಲೂ ಹೆಚ್ಚಿನ ಮಧುಮೇಹಿಗಳಿದ್ದು, ಮುಂದಿನ 5 ವರ್ಷಗಳಲ್ಲಿ ಇನ್ನೂ ಹೆಚ್ಚಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಶಿಬಿರದಲ್ಲಿ ಆಯುಷ್ ಇಲಾಖೆಯ ತಾಲೂಕು ಅಧಿಕಾರಿ ಡಾ. ಮಲ್ಲೇಶ್ ದೊಡ್ಡಗುಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರದಲ್ಲಿ ವೈದ್ಯರಾದ ಡಾ. ಪ್ರಮೀಳಾ, ಡಾ. ಕಿಶೋರ್, ಡಾ. ಶ್ರೀನಿವಾಸ ನಾಯಕ್, ಡಾ. ಮಧು, ಡಾ. ಗೌತಮ್, ಡಾ. ಲಾವಣ್ಯ ಮೊದಲಾದವರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಆಯುಷ್ ನಿರ್ದೇಶನಾಲಯ ಹೊರತಂದಿರುವ ಮಧುಮೇಹ ಮಾಹಿತಿ ಕೈಪಿಡಿ ಪುಸ್ತಕವನ್ನು ಯಳನಡು ಶ್ರೀಗಳು ಬಿಡುಗಡೆ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.