ಚಿಕ್ಕಮಗಳೂರು

ಪುರುಷರ ಕಬಡ್ಡಿ ಪಂದ್ಯಾವಳಿ

Published On :

ಚಿಕ್ಕಮಗಳೂರು: ದಂತ ಸ್ಪೋರ್ಟ್ಸ್ ಯುವ ಅಭಿವೃದ್ಧಿ ಸಂಘದ ವತಿಯಿಂದ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಏಪ್ರಿಲ್ 13 ರಿಂದ ಎರಡು ದಿನಗಳ ಕಾಲದ ರಾಜ್ಯಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಸ್ಪರ್ಧೆಯ ವಿಜೇತರಿಗೆ ಮೊದಲನೇ ಬಹುಮಾನವಾಗಿ 20 ಸಾವಿರ ನಗದು ಮತ್ತು ಟ್ರೋಫಿ, ಎರಡನೇ ಬಹುಮಾನವಾಗಿ 14 ಸಾವಿರ ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ತಿಳಿಸಿದ್ದಾರೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಚಿಸುವ ತಂಡಗಳು 99455 34282 ಅಥವಾ 84959 11428 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ ಏಪ್ರಿಲ್ 4 ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಸಾಮೂಹಿಕ ವಿವಾಹ
ನರಸಿಂಹರಾಜಪುರ: ಮಡುಬಾರಿನ ದಾನಿವಾಸ ದುರ್ಗಾಂಬಾ ದೇವಿಯ ರಥಾರೋಹಣ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾ. 29ರ ಶುಕ್ರವಾರ ನಡೆಯಲಿದೆ.  ಮಾ.25 ರಿಂದಲೇ ದಾನಿವಾಸ ದುರ್ಗಾಂಬ ದೇವಿ ಜಾತ್ರೋತ್ಸವ ಪ್ರಾರಂಭವಾಗಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಮಾ.29 ರ ಶುಕ್ರವಾರ ಬೆಳಗ್ಗೆ ಸಾಮೂಹಿಕ ವಿವಾಹ, ಮಧ್ಯಾಹ್ನ ಅಮ್ಮನವರ ರಥೋತ್ಸವ ನಡೆಯಲಿದ್ದು, ರಾತ್ರಿ 8 ಕ್ಕೆ ರಾಜಬೀದಿಯಲ್ಲಿ ರಥೋತ್ಸವ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.