ಮೆಸ್ಕಾಂ ಕಚೇರಿಗೆ ಗುತ್ತಿಗೆದಾರರ ಮುತ್ತಿಗೆ
ಕ.ಪ್ರ.ವಾರ್ತೆ ಟಿ ಕಡೂರು ಟಿ ಮಾ.27
ವಿದ್ಯುತ್ ಗುತ್ತಿಗೆದಾರರ ಕಚೇರಿ ಕೆಲಸಗಳಲ್ಲಿ ವಿಳಂಬ, ವಿದ್ಯುತ್ ಉಪಕರಣಗಳ ಕೊರತೆ, ಪರಿವರ್ತಕಗಳ ನೀಡಿಕೆ ವಿಳಂಬ ಸೇರಿದಂತೆ ಹಲವು ಬೇಡಿಕೆ ಈಡೇರಿಸಬೇಕು ಎಂದು ಕಡೂರು ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.
ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಮೇಶ್ ನೇತೃತ್ವದಲ್ಲಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗುತ್ತಿಗೆದಾರರು ಮೆಸ್ಕಾಂ ಇಲಾಖೆಯ ಕಾರ್ಯವೈಖರಿಯನ್ನು ಖಂಡಿಸಿದರು.
ಇದೇ ಸಂದರ್ಭದಲ್ಲಿ ಸಂಘದ ಮುಖಂಡರು ಮಾತನಾಡಿ, ಮೆಸ್ಕಾಂ ಇಲಾಖೆಯ ಹೊಸ ನಿಯಮದಂತೆ ವಿದ್ಯುತ್ ಸಂಪರ್ಕಕ್ಕೆ ಅಂತರ್ಜಾಲದಲ್ಲಿ ನೋಂದಣಿ ಮಾಡಿಸುವ ಎಪಿಆರ್ ಡಿಪಿ ಪದ್ಧತಿ ಜಾರಿಗೆ ತರಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಿದ ಕೇವಲ 10 ರಿಂದ 15 ದಿನಗಳಲ್ಲಿ ಸಂರ್ಪಕ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿತ್ತು. ಆದರೆ ಇದೀಗ ಅಂತರ್ಜಾಲದ ನೋಂದಣಿ ಪದ್ಧತಿಯಿಂದ ಹಿಂದಿನ ಕಡಿಮೆ ಅವಧಿ ತಗಲುವುದಕ್ಕಿಂತ ಹೆಚ್ಚು ದಿನಗಳಲು ತಗಲುತ್ತದೆ. ಇದರಿಂದ ಗುತ್ತಿಗೆದಾರರು ಜನರಿಗೆ ಸೇವೆ ಒದಗಿಸಲು ವಿಳಂಬವಾಗುತ್ತದೆ ಎಂದರು.
ಉದ್ದಶಪೂರ್ವಕ ವಿಳಂಬ: ವಿದ್ಯುತ್ ಪರಿವರ್ತಕಗಳನ್ನು ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುವುದು ಹಾಗೂ ಕಚೇರಿ ಕೆಲಸ ಕಾರ್ಯಗಳಲ್ಲಿ ಕೂಡ ಇಲಾಖೆ ಅಧಿಕಾರಿಗಳ ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ಉದ್ದೇಶಪೂರ್ವವಾಗಿ ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆಂದು ಗ್ರಾಹಕರಿಂದ ದೂರುಗಳು ಬರುತ್ತಿವೆ ಎಂದರು.
ಈ ಬಗ್ಗೆ ಇಲಾಖೆಯ ಮೇಲಧಿಕಾರಿಗಳಿಗೆ ತಿಳಿಸಿದರೂ ಕೂಡ ಯಾವುದೇ ಬದಲಾವಣೆ ಮಾಡಿಕೊಡದೆ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುತ್ತಿಲ್ಲ.
ಈ ಹಿನ್ನೆಲೆಯಲ್ಲಿ ಆಗುತ್ತಿರುವ ತೊಂದರೆ ಕುರಿತು ಪತ್ರ ಮುಖೇನ ಮನವಿ ಮಾಡಿದರೂ ಸಹ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಈ ಕೂಡಲೇ ಮನವಿಗೆ ಸ್ಪಂದಿಸಿ ಅನುಕೂಲ ಮಾಡಿಕೊಡದಿದ್ದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮತ್ತೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಶೀಘ್ರ ವಿಲೇವಾರಿಗೆ ಕ್ರಮ: ಮನವಿ ಸ್ವೀಕರಿಸಿದ ಮೆಸ್ಕಾಂ ವಿಭಾಗೀಯ ವ್ಯವಸ್ಥಾಪಕ ಎಂಜಿನಿಯರ್ ಕರಿಸಿದ್ದಯ್ಯ, ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ದೂರವಾಣಿ ಮುಖೇನ ಮಾಹಿತಿ
ಪಡೆದು ಏಪ್ರಿಲ್ 2ರ ನಂತರ ಬೇಡಿಕೆ ಈಡೇರಿಕೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿ, ವಿದ್ಯುತ್ ಸಂಪರ್ಕಕ್ಕೆ ಈ ಹಿಂದಿನ ಪದ್ಧತಿ ಮುಂದುವರಿಸುವುದಾಗಿ ಮತ್ತು ವಿದ್ಯುತ್ ಪರಿವರ್ತಕಗಳ ಶೀಘ್ರ ವಿಲೇವಾರಿ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ಬಿ.ಆರ್. ಲೋಕೇಶ್, ಉಪಾಧ್ಯಕ್ಷ ಮರುಳಸಿದ್ದಯ್ಯ, ಪದಾಧಿಕಾರಿಗಳಾದ ಏಜಾಜ್, ನಜೀರ್, ಮಂಜುನಾಥ್, ರಾಜು (ಅಪ್ಪು), ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

