ನೀರಿನ ಕಾಮಗಾರಿ ಅಪೂರ್ಣ
ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ.28
ತಾಲೂಕಿನ ನರಿಗುಡ್ಡೆ, ಬಗನೆಹೆದ್ದಾಳು ಹಾಗೂ ನಿಡಗೋಡು ಗ್ರಾಮದಲ್ಲಿ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿ ಅಪೂರ್ಣಗೊಂಡಿವೆ ಹಾಗೂ ಕಳಪೆಯಾಗಿವೆ. ಆದುದರಿಂದ ಸಂಬಂಧಪಟ್ಟ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಬಾರದು ಎಂದು ಅಖಿಲ ಕರ್ನಾಟಕ ಎಚ್.ಡಿ. ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಹೊಲದಗದ್ದೆ ಗಿರೀಶ್ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಈ ಅಕ್ರಮದಲ್ಲಿ ಜಿಪಂ ಎಂಜಿನಿಯರ್ನ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಶಾಮೀಲಾಗಿದ್ದಾರೆ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಆವತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ನರಿಗುಡ್ಡೆ ನೀರು ಸರಬರಾಜು ಯೋಜನೆಗೆ ರು. 13,86,958, ಬ್ಯಾರವಳ್ಳಿ ಗ್ರಾಮ ಪಂಚಾಯ್ತಿಯ ಬಗನೆಹೆದ್ದಾಳು ಮಲ್ಲಂದೂರು ನೀರು ಸರಬರಾಜು ಯೋಜನೆಗೆ ರು. 19,77,096 ಹಾಗೂ ನಿಡಗೋಡು ನೀರು ಸರಬರಾಜು ಯೋಜನೆಗೆ ರು. 8,44,335 ಮಂಜೂರಾಗಿದೆ.
ಈ ಗ್ರಾಮಗಳಿಗೆ ಇದುವರೆಗೆ ಒಂದು ತೊಟ್ಟು ನೀರು ಬಂದಿಲ್ಲ. ಉತ್ತಮ ಗುಣಮಟ್ಟದ ಪೈಪ್ ಹಾಕಿಲ್ಲ. ಅಂದಾಜು ಪಟ್ಟಿಯ ಪ್ರಕಾರ ಚೆಕ್ ಡ್ಯಾಂ ನಿರ್ಮಾಣ ಮಾಡಿಲ್ಲ. ಮಲ್ಲಂದೂರಿನ ಸಂತೆಗುಡ್ಡದ ಬಳಿ ನಿರ್ಮಾಣ ಮಾಡಿರುವ ನೀರಿನ ಟ್ಯಾಂಕ್ ಕಳಪೆಯಾಗಿದೆ.
ಈ ಎಲ್ಲಾ ಕಾಮಗಾರಿಗಳ ಬಗ್ಗೆ ಉನ್ನತ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಈ ಕಾಮಗಾರಿಯ ಬಿಲ್ ಪಾವತಿ ಮಾಡಬಾರದು. ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

