ಕುಡಿವ ನೀರಿಗೆ ಆಗ್ರಹಿಸಿ ಪ್ರತಿಭಟನೆ
ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ.28
ಸಮರ್ಪಕ ಕುಡಿಯುವ ನೀರಿಗೆ ಆಗ್ರಹಿಸಿ ಇಲ್ಲಿನ ಚಂದ್ರನಗರ ನಿವಾಸಿಗರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಗೌರಮ್ಮ ನೇತೃತ್ವದಲ್ಲಿ ಮಹಿಳೆಯರು ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಚಂದ್ರನಗರದಲ್ಲಿ ಕಳೆದ 15 ವರ್ಷಗಳ ಹಿಂದೆ ಜವಾಹರ್ ರೋಜ್ಗಾರ್ ಯೋಜನೆಯಡಿ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ. ಇದರಿಂದ ಚಂದ್ರನಗರಕ್ಕೆ ನೀರು ಸರಬರಾಜು ಮಾಡಲಾಗುತ್ತಿತ್ತು.
ಆದರೆ, ಈ ಟ್ಯಾಂಕ್ನಿಂದ ಕರ್ಕಿಪೇಟೆ, ಕೆಂಪನಹಳ್ಳಿ ಹಾಗೂ ಬಾಳೆಹಳ್ಳಿಗಳಿಗೆ ನೀರು ಸರಬರಾಜು ಮಾಡುತ್ತಿರುವುದರಿಂದ ಚಂದ್ರನಗರದಲ್ಲಿ ಕುಡಿವ ನೀರಿನ ಅಭಾವ ತಲೆದೋರಿದೆ. ಈ ಬಗ್ಗೆ ಸಂಬಂಧಪಟ್ಟರಿಗೆ ಕೇಳಿದರೆ ಸ್ವಂತ ನಲ್ಲಿ ಸಂಪರ್ಕ ಪಡೆಯುವಂತೆ ಹೇಳುತ್ತಿದ್ದಾರೆ. ಅದುದರಿಂದ ಇಲ್ಲಿನ ನೀರನ್ನು ಚಂದ್ರನಗರದವರಿಗೆ ಮಾತ್ರ ಬಳಸಿಕೊಳ್ಳಲು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಚಂದ್ರನಗರದ ನಿವಾಸಿಗರಾದ ಶಿವಮ್ಮ, ಜಯಮ್ಮ, ರತ್ನಮ್ಮ, ಬೀರಮ್ಮ, ಸುಶೀಲ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

