ಚಿಕ್ಕಮಗಳೂರು

ಕಾಂಗ್ರೆಸ್ ಎಂದರೆ ವಿನಾಶಜೆಡಿಎಸ್ ಅಂದರೆ ಜಗಳ ಪಕ್ಷ

Published On :

ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ.29
ಕಾಂಗ್ರೆಸ್ ಪಕ್ಷವೆಂದರೆ ವಿನಾಶ, ಜೆಡಿಎಸ್ವೆಂದರೆ ಜಗಳ, ಬಿಜೆಪಿ ಎಂದರೆ ವಿಕಾಸ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ತಾಲೂಕಿನ ಹಿರೇಗೌಜ, ಉದ್ದೇಬೋರನಹಳ್ಳಿ, ಬಿಳೇಕಲ್ಲಹಳ್ಳಿ, ಸಿರಬಡಿಗೆ, ಲಕ್ಯಾ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಜನಾಭಿಪ್ರಾಯ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಮಾತನಾಡಿದರು.
ಮತದಾರರು ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ವಾಮಮಾರ್ಗದಲ್ಲಿ ಗೆಲ್ಲಲು ಯತ್ನಿಸುವ ಅಭ್ಯರ್ಥಿಗಳನ್ನು ತಿರಸ್ಕರಿಸಬೇಕು ಎಂದರು.
ಎಂಜಿನಿಯರಿಂಗ್ ಮಂಜೂರು: ಸಚಿವರಾದ ನಂತರ ಕೆಲವೇ ದಿನಗಳಲ್ಲಿ ನಗರಕ್ಕೆ ಮೆಡಿಕಲ್, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಂಜೂರು ಮಾಡಿಸಿದ್ದೇನೆ. ಅಲ್ಲದೆ ಹಾಲಿನ ಡೈರಿ ಹಾಗೂ ಸ್ನಾತಕೋತ್ತರ ಕೇಂದ್ರಗಳನ್ನು ಮಂಜೂರು ಮಾಡಿಸಲಾಗಿದೆ ಎಂದು ಹೇಳಿದರು.
ಅಧಿಕಾರ ಶಾಶ್ವತವಲ್ಲ. ಅಧಿಕಾರದಲ್ಲಿರಲಿ ಇಲ್ಲದಿರಲಿ, ನಿಮ್ಮ ಜೊತೆ ಇದ್ದು, ನಿಮ್ಮ ಸಮಸ್ಯೆಗಳಿಗೆ ಸ್ಪಂಧಿಸುತ್ತೇನೆ. ಜಾತಿ ಮತ್ತು ಹಣಕ್ಕೆ ಮಣೆ ಹಾಕುವ ಕ್ಷೇತ್ರ ನನ್ನದಲ್ಲ. ಪಕ್ಷದ ಕಾರ್ಯಕರ್ತರು ಮತ್ತು ಮತದಾರರೇ ನನಗೆ ಶಕ್ತಿ. ಚುನಾವಣೆ ಸಂದರ್ಭದಲ್ಲಿ ನನಗೆ ನೀವು ಶಕ್ತಿ ನೀಡಿ ಗೆಲ್ಲಿಸಿದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಶ್ರಮ ಹಾಕಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.