31 ಕ್ಕೆ ಮರು ಪಾವತಿಗೆ ಕಡೇ ದಿನ
ಮೂಡಿಗೆರೆ: ಬ್ಯಾಂಕಿನಲ್ಲಿ ಕೃಷಿ ಸಾಲ ಪಡೆದ ರೈತರು ಕಂತುಗಳನ್ನು ಮರು ಪಾವತಿಸಲು ಮಾ.31 ಕಡೆ ದಿನವಾಗಿದ್ದು. 31ರೊಳಗೆ ಮರುಪಾವತಿಸಿ ಬ್ಯಾಂಕಿನಿಂದ ದೊರೆಯುವ ರಿಯಾಯಿತಿಗಳನ್ನು ಪಡೆದುಕೊಳ್ಳಬೇಕು ಎಂದು ಫಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಚ್.ಬಿ. ಶಿವಣ್ಣ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬ್ಯಾಂಕಿನ ಆರ್ಥಿಕ ಹಿತತೃಷ್ಟಿಯಿಂದ 2012-13ನೇ ಸಾಲಿನ ಆರ್ಥಿಕ ವರ್ಷಾಂತ್ಯ 31ರ ಭಾನುವಾರ ಬಂದಿದ್ದು. ಅಂದೂ ಕೂಡಾ ದಿನನಿತ್ಯದಂತೆ ಪೂರ್ಣ ಪ್ರಮಾಣದ ಕಚೇರಿ ಕೆಲಸ ನಿರ್ವಹಿಸಲಿದೆ.
ಶೇ.6, ಶೇ.4, ಹಾಗೂ ಶೇ.3 ರ ಬಡ್ಡಿ ದರದಲ್ಲಿ ಪಡೆದ ಸಾಲದ ಕಂತುಗಳನ್ನು ಮರು ಪಾವತಿ ಮಾಡಿ, ಬ್ಯಾಂಕಿನಿಂದ ಸಿಗುವ ಬಡ್ಡಿ ರಿಯಾಯಿತಿಯನ್ನು ಪಡೆಯುವಂತೆ ಮನವಿ ಮಾಡಿದ್ದಾರೆ.
ವ್ಯಕ್ತಿ ಆತ್ಮಹತ್ಯೆ
ಶೃಂಗೇರಿ: ತಾಲೂಕಿನ ಮರ್ಕಲ್ ಪಂಚಾಯಿತಿ ಮಾಗಲು ಎಂಬಲ್ಲಿ ಮಂಜುನಾಥ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಮಂಜುನಾಥ್ (55) ಎಂಬವರು ಟಿಮೆಟ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಂದು ಅಥರ್ವಶೀರ್ಷ, ಕ್ಷೀರಾಭಿಷೇಕ
ಸೊರಬ: ಸಂಕಷ್ಟಹರ ಚತುರ್ಥಿ ಅಂಗವಾಗಿ ಇಂದು ಶನಿವಾರ ಬೆಳಿಗ್ಗೆ 9 ರಿಂದ ಇಲ್ಲಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅಥರ್ವಶೀರ್ಷ, ಕ್ಷೀರಾಭಿಷೇಕ, ಸಹಸ್ರ ಮೋದಕ ಹವನ, ಮಧ್ಯಾಹ್ನ 1 ಗಂಟೆಗೆ ಪೂರ್ಣಾಹುತಿ ನಡೆಯಲಿದ್ದು, ಗಜಾನನ ಯುವಕ ಸಂಘದಿಂದ ಪ್ರಸಾದ ವಿತರಣೆ ನಡೆಯುತ್ತದೆ. ಸೇವಾಕರ್ತರು ಹೆಚ್ಚಿನ ವಿಷಯಗಳಿಗೆ ಅರ್ಚಕರನ್ನು ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

