ಜಿಲ್ಲೆಯ 5 ಕ್ಷೇತ್ರದಲ್ಲಿ ಬಹುಜನ ಸಮಾಜವಾದಿ ಸ್ಪರ್ಧೆ
ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ. 30
ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಸ್ಪರ್ಧೆ ಮಾಡಲಿದೆ.
ಮೂಡಿಗೆರೆ ಕ್ಷೇತ್ರದಿಂದ ಯು.ಬಿ. ಮಂಜಯ್ಯ, ಚಿಕ್ಕಮಗಳೂರು- ಕೆ.ಟಿ. ರಾಧಾಕೃಷ್ಣ, ಶೃಂಗೇರಿ- ಕೆ.ಎಂ. ಗೋಪಾಲ್, ತರೀಕೆರೆ- ಲಿಂಗರಾಜಪ್ಪ, ಕಡೂರು- ಜಗದೀಶ್.
ರಾಜ್ಯ ಸಮಿತಿ ನಿರ್ದೇಶನದ ಮೇರೆಗೆ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದೇ ಮೊದಲ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.
ಬಹುಜನ ಸಮಾಜ ಪಕ್ಷವು ಹತ್ತಾರು ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿಯೇ ತೊಡಗಿರುವ ನಮ್ಮ ನಾಯಕರನ್ನು ಚುನಾವಣಾ ಕಣಕ್ಕಿಳಿಸಲಿದೆ. ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹಾಕುವ ಮೂಲಕ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಪ್ರತಿಜ್ಞೆ ಸ್ವೀಕರಿಸಿದ್ದೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಎಸ್ಪಿಯ ರಾಜ್ಯ ಕಾರ್ಯದರ್ಶಿ ಜಿ.ಕೆ. ಬಸವರಾಜ್, ಜಿಲ್ಲಾ ಸಂಯೋಜಕ ಜಾಕೀರ್ ಹುಸೇನ್, ಈಶ್ವರ್ ಹಾಗೂ ಕುಮಾರ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

