ಪತ್ರಕರ್ತರೊಂದಿಗೆ ಅಸಭ್ಯ ವರ್ತನೆ: ಖಂಡನೆ
ಶೃಂಗೇರಿ: ಪಟ್ಟಣದಲ್ಲಿ ಕಳೆದ ಕೆಲ ದಿನಗಳಿಂದ ಟ್ರಾಫಿಕ್ ನಿಯಂತ್ರಣ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ದಳದ ಕೆಲ ಸಿಬ್ಬಂದಿಗಳ ಅತಿರೇಕದ ವರ್ತನೆಯನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಇವರನ್ನು ಟ್ರಾಫಿಕ್ ನಿಯಂತ್ರಿಸಲು ನೇಮಿಸಲಾಗಿದೆ.
ಶನಿವಾರ ಪತ್ರಕರ್ತರೊಬ್ಬರನ್ನು ಉದ್ದೇಶ ಪೂರ್ವಕವಾಗಿ ತಡೆಗಟ್ಟಿದ್ದೂ ಅಲ್ಲದೆ, ಬೆನ್ನಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ತಮ್ಮ ಅನಾಗರಿಕ ವರ್ತನೆ ತೋರ್ಪಡಿಸಿರುವುದು ಖಂಡನೀಯ.
ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ಖಾಯಂ ಆಗಿ ಟ್ರಾಫಿಕ್ ನಿಯಂತ್ರಣಕ್ಕೆ ನೇಮಿಸಿ, ಗೃಹರಕ್ಷಕ ದಳದವರನ್ನು ಕರ್ತವ್ಯದಿಂದ ವಿಮುಕ್ತಿಗೊಳಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು. ಸಿಬ್ಬಂದಿವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಸಂಘವು ಆಗ್ರಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

