ಚಿಕ್ಕಮಗಳೂರು

16ರಂದು ಜೆಡಿಎಸ್ ಅಭ್ಯರ್ಥಿ ಚೇತನ್ ನಾಮಪತ್ರ ಸಲ್ಲಿಕೆ

Published On :

ಕ.ಪ್ರ. ವಾರ್ತೆ, ಚಿಕ್ಕಮಗಳೂರು, ಮಾ. 31
ಮೂಡಿಗೆರೆ ಕ್ಷೇತ್ರದ ಜೆ.ಡಿ.ಎಸ್. ಅಭ್ಯರ್ಥಿಯಾಗಿ ಚೇತನ್ ಅವರು ಏ.  16 ರಂದು ನಾಮಪತ್ರ ಸಲ್ಲಿಸಲಿದ್ದು, ಪಕ್ಷದ ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕ್ಷೇತ್ರ ಸಮಿತಿ ಅಧ್ಯಕ್ಷ ಡಿ.ಆರ್. ಉಮಾಪತಿ ಮನವಿ ಮಾಡಿದ್ದಾರೆ.
ಮೂಡಿಗೆರೆ ಕ್ಷೇತ್ರದ ಆವತಿ ಗ್ರಾಮದಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಣ, ಹೆಂಡ, ಸೀರೆ ಇತ್ಯಾದಿ ಆಮಿಶಗಳನ್ನು ಒಡ್ಡಿ ಅಕ್ರಮವಾಗಿ ಮತಗಳಿಕೆಗೆ ಮುಂದಾಗಲು ಹೊರಟಿರುವ ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರಭಲ ಪೈಪೋಟಿ ನೀಡುವ ಸಲುವಾಗಿ ಕಾರ್ಯಕರ್ತರು ಒಗ್ಗಟ್ಟಿನ ಶಕ್ತಿ ಪ್ರದರ್ಶಿಸುವ ಅಗತ್ಯವಿದೆ ಎಂದರು.
ಗೊಂದಲ ಬೇಡ: ಜೆಡಿಎಸ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾರ್ಯಕರ್ತರಿಗೆ ಗೊಂದಲ ಬೇಡ. ಕ್ಷೇತ್ರದ ಮುಖಂಡರುಗಳು ಸಭೆ ಸೇರಿ ಚೇತನ್‌ರನ್ನು ಒಮ್ಮತದ ಅಭ್ಯರ್ಥಿಯಾಗಿ ಒಕ್ಕೋರಲರಾಗಿ ಆಯ್ಕೆ ಮಾಡಲು ಒಪ್ಪಿದ್ದೇವೆ. ಹಣದ ಆಸೆಯಿಲ್ಲದ ವ್ಯಕ್ತಿಯನ್ನು ಬೆಂಬಲಿಸಿದ್ದೇವೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ ಜೆಡಿಎಸ್ ಗೆಲುವು ನಿಶ್ಚಿತ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಂತರ ಹಣವನ್ನು ಲೂಟಿ ಮಾಡುವ ಮೂಲಕ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಿರುವ ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತದ ವೈಫಲ್ಯವೇ ಈ ಬಾರಿ ಜೆಡಿಎಸ್‌ಗೆ ವರದಾನವಾಗಲಿದೆ ಎಂದು ಹೇಳಿದರು.
ಜನಸೇವೆ ಗುರಿ ಹೊಂದಿದ್ದೇನೆ: ಸಂಭವನೀಯ ಅಭ್ಯರ್ಥಿ ಚೇತನ್ ಮಾತನಾಡಿ, ಹಣ ಮಾಡುವ ಆಸೆ ಹೊತ್ತು ರಾಜಕಾರಣಕ್ಕೆ ಮುಂದಾಗಿಲ್ಲ. ಸರ್ಕಾರಿ ನೌಕರನಾಗಿ ಬಹಳಷ್ಟು ಅವಕಾಶಗಳಿದ್ದರೂ ಅದನ್ನು ತ್ಯಜಿಸಿದ್ದು ಜನಸೇವೆ ಗುರಿ ಹೊಂದಿದ್ದೇನೆ ಎಂದರು.
ವಿಪಕ್ಷಗಳ ಬಗ್ಗೆ ಟೀಕೆ ಮಾಡುವುದಕ್ಕಿಂತ ನಮ್ಮ ಪಕ್ಷದ ಧ್ಯೇಯೋದ್ದೇಶಗಳನ್ನು ಜನರ ಮುಂದಿಟ್ಟು ಮತಯಾಚನೆ ಮಾಡಲು ಬಯಸುತ್ತೇನೆ. ಸರ್ಕಾರಿ ನೌಕರಿಯಲ್ಲಿದ್ದಾಗ ನಾನು ಮಾಡಿದ ಜನಸೇವೆ ನನಗೆ ಶ್ರೀರಕ್ಷೆಯಾಗಲಿದೆ ಎಂದು ನಂಬಿ ನಿಮ್ಮ ಮುಂದೆ ಬಂದಿದ್ದು, ಕಾರ್ಯಕರ್ತರು ಮತ್ತು ಮುಖಂಡರ ಪರಿಶ್ರಮದಿಂದ ಕುಮಾರಣ್ಣನ ಕೈಬಲಪಡಿಸಲು ಸಹಕಾರಿಯಾಗುತ್ತದೆ ಎಂದರು.
ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಹೊಲದಗದ್ದೆ ಗಿರೀಶ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾಡಿದ ಜನಪರ ಕೆಲಸಗಳನ್ನು ಜನರ ಬಳಿ ಕೊಂಡೊಯ್ದು ಚುನಾವಣೆ ಎದುರಿಸಿದರೆ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗುತ್ತದೆ. ದೇವರ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಿರುವ ಬಿಜೆಪಿ ಬಗ್ಗೆ ಜನ ಭ್ರಮನಿರಸನಗೊಂಡಿದ್ದಾರೆ ಎಂದರು.
ರಾಜ್ಯ ಸಮಿತಿ ಸದಸ್ಯ ಬಾಲಕೃಷ್ಣೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಪವಿತ್ರಾ ರಂಜಿತ್, ಹೋಬಳಿ ಅಧ್ಯಕ್ಷ ಸತೀಶ್, ತಮ್ಮಣ್ಣಗೌಡ, ನಾಗೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.