ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನ
ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಶುಕ್ರವಾರ ಸಂಜೆ ತೆರೆ ಬೀಳಲಿದೆ.
ಗುರುವಾರ ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್. ಶಾಂತೇಗೌಡ ಅವರು ಪಾದಯಾತ್ರೆಯ ಮೂಲಕ ಮತಯಾಚನೆ ಮಾಡಿದರು. ಕಾಂಗ್ರೆಸ್ ಕಾರ್ಯಕರ್ತರು ಪ್ರಮುಖ ರಸ್ತೆಯಲ್ಲಿ ಬೈಕ್ ರ್ಯಾಲಿ ನಡೆಸಿದರು.
ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಶುಕ್ರವಾರದಂದು ಬಿಜೆಪಿ ನಗರದಲ್ಲಿ ರೋಡ್ ಶೋ ಹಮ್ಮಿಕೊಂಡಿದೆ. ಕಾಂಗ್ರೆಸ್ ಮತದಾನದ ಬಗ್ಗೆ ಜಾಗೃತಿ ಮತ್ತು ಬಹಿರಂಗ ಸಭೆಯನ್ನು ಏರ್ಪಡಿಸಿದೆ.
ಇಲ್ಲಿನ ಕೆಇಬಿ ವೃತ್ತದಿಂದ ಹೊರಡಲಿರುವ ಕಾಂಗ್ರೆಸ್ನ ಮತದಾನದ ಜಾಗೃತಿ ಹಾಗೂ ಮತಯಾಚನೆ ಮೆರವಣಿಗೆ ಪ್ರಮುಖ ರಸ್ತೆಯ ಮೂಲಕ ಜಿಲ್ಲಾ ಆಟದ ಮೈದಾನಕ್ಕೆ ತೆರಳಲಿದೆ. ಬಳಿಕ ಬಹಿರಂಗ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪಕ್ಷದ ಮುಖಂಡರು ಭಾಷಣ ಮಾಡಲಿದ್ದಾರೆ.
ಕೊನೆ ಕ್ಷಣ: ಬಹಿರಂಗ ಪ್ರಚಾರಕ್ಕೆ ಕೇವಲ 24 ಗಂಟೆಗಳು ಮಾತ್ರ ಬಾಕಿ ಉಳಿದುಕೊಂಡಿದ್ದರಿಂದ ಚಿಕ್ಕಮಗಳೂರು ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.
ಪಕ್ಷೇತರ ಅಭ್ಯರ್ಥಿಗಳು ತಾವು ಪ್ರಚಾರದಲ್ಲಿ ಹಿಂದುಳಿದಿಲ್ಲ ಎನ್ನುವಂತೆ ಕೆಲವೆಡೆ ಪ್ರಚಾರ ನಡೆಸುತ್ತಿರುವುದು ಕಂಡು ಬಂದಿತು.
ಬಿಜೆಪಿಯಲ್ಲಿ ಬಿನ್ನಮತವಿಲ್ಲ: ಕೆಂಜಿಗೆ ಕೇಶವ್
ಮೂಡಿಗೆರೆ: ಬಿಜೆಪಿಯಲ್ಲಿ ಯಾವುದೇ ಬಿನ್ನಮತವಿಲ್ಲ. ಇದನ್ನು ವಿರೋಧ ಪಕ್ಷಗಳು ತಮ್ಮ ಲಾಭಕ್ಕಾಗಿ ಸೃಷ್ಟಿ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೆಂಜಿಗೆ ಕೇಶವ್ ತಿಳಿಸಿದರು.
ಬಿಜೆಪಿ ಅಭ್ಯರ್ಥಿ ಎಂ.ಪಿ. ಕುಮಾಸ್ವಾಮಿ ಪರ ಪಟ್ಟಣದ ವಿದ್ಯಾನಗರ ಹಾಗೂ ಹೆಸಗಲ್ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿ, ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳು ಹಿಂದೆ ಯಾವ ಪಕ್ಷದಲ್ಲಿಯೂ ನಡೆದಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಜನರಲ್ಲಿ ಮತಯಾಚನೆ ಮಾಡಲಾಗುತ್ತಿದೆ. ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿದ್ದು, ಈ ಬಾರಿ ಮತ್ತೆ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಜನರ ನಿರೀಕ್ಷೆಗೆ ಮೀರಿದ ಕೆಲಸಗಳನ್ನು ಮಾಡಲಾಗುವುದು ಎಂದು ಹೇಳಿದರು.
ಬಿಜೆಪಿ ಜೇನು ಕೃಷಿ ಮಾರಾಟ ಮಂಡಳಿ ಅಧ್ಯಕ್ಷ ದುಂಡುಗ ಪ್ರಮೇದ್, ಶಿವಣ್ಣ, ಸದಸ್ಯ ಹೆಸಗಲ್ ಗಿರೀಶ್, ವಾಹನ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಮಂಜುನಾಥ್, ಕಡುವಳ್ಳಿ ರವಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

