ಚಿಕ್ಕಮಗಳೂರು

ಮತದಾನ ಜಾಗೃತಿಗಾಗಿ ಬೈಕ್ ಜಾಥಾ

Published On :

ಕಪ್ರವಾರ್ತೆ,ಚಿಕ್ಕಮಗಳೂರು,ಮೇ 3
ವಿಧಾನಸಭಾ ಚುನಾವಣೆಗೆ ಮತದಾರರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಸರಕಾರಿ ನೌಕರರಿಂದ ಶುಕ್ರವಾರ ನಗರದಲ್ಲಿ ಬೈಕ್ ಜಾಥಾ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಆರಂಭವಾದ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್ ಅವರು ಬೈಕ್ ಚಲಾಯಿಸುವ ಮೂಲಕ ಚಾಲನೆ ನೀಡಿದರು.
 ಬೈಪಾಸ್ ರಸ್ತೆ, ಹಿರೇಮಗಳೂರು ವೃತ್ತ, ಐ.ಜಿ. ರಸ್ತೆ, ರತ್ನಗಿರಿ ರಸ್ತೆ ಮೂಲಕ ಎಂ.ಜಿ. ರಸ್ತೆಗೆ ಬಂದು ಆಜಾದ್ ಪಾರ್ಕ್ ವೃತ್ತದಲ್ಲಿ ಬೈಕ್ ರ್ಯಾಲಿ ಸಮಾಪನಗೊಂಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಿ. ಶಿವಶಂಕರ್, ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತ ಚಲಾಯಿಸಲು ಜಿಲ್ಲಾಡಳಿತ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಬೈಕ್ ಜಾಥಾದ ಮೂಲಕ ನಗರದಲ್ಲಿ ಮತದಾನದ ಬಗ್ಗೆ ಇನ್ನಷ್ಟು ಆಸಕ್ತಿ ಮೂಡಿಸಲು ಸಾರ್ವಜನಿಕರಿಗೆ ಪ್ರೇರೇಪಿಸಲಾಗಿದೆ. ನಾಗರಿಕರು ಭಾನುವಾರ ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಅತ್ಯುನ್ನತ ಹಕ್ಕನ್ನು ಚಲಾಯಿಸಬೇಕು ಎಂದು ಸಲಹೆ ನೀಡಿದರು.
ಬೈಕ್ ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ನೌಕರರು ಭಾಗವಹಿಸಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ ಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.