ಕೆಜೆಪಿ ಅತ್ಯಧಿಕ ಸ್ಥಾನ ಗೆಲ್ಲಲಿದೆ
ತರೀಕೆರೆ: ಕರ್ನಾಟಕ ಜನತಾ ಪಕ್ಷಕ್ಕೆ ಅತ್ಯಧಿಕ ಸ್ಥಾನಗಳು ದೊರಕುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಪಟ್ಟಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ತಮ್ಮ ಗೆಲವು ನಿಶ್ಚಿತ, ಕೆಜೆಪಿಗೆ ಅತ್ಯಧಿಕ ಸ್ಥಾನಗಳು ದೊರಕಲಿದೆ ಎಂದು ತಿಳಿಸಿದರು.
ಅಭಿಮಾನಿಗಳು ನೀಡಿದ ಪುಷ್ಪಾಹಾರ ಸ್ವೀಕರಿಸಿ ಮಾತನಾಡಿದ ಅವರು, ಉತ್ಸಾಹದಿಂದ ಕೆಲಸ ಮಾಡಿ ಕೆಜೆಪಿ ಅತ್ಯಧಿಕ ಸ್ಥಾನಗಳನ್ನು ಖಂಡಿತ ಎಂದು ಹೇಳಿದರು.
ಮುಖಂಡರಾದ ಗಿರೀಶ್, ಮಂಜುನಾಥ್, ಯಶೋಧರಮೂರ್ತಿ, ಗುರುಮೂರ್ತಿ, ರಘುಬನಪ್ಪ, ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಯಡಿಯೂರಪ್ಪ ಅವರನ್ನು ಸ್ವಾಗತಿಸಿದರು.
ಪೊಲೀಸರ ಮೇಲೆ ಹಲ್ಲೆಗೆ ಯತ್ನ
ಚಿಕ್ಕಮಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದ ಮತಗಟ್ಟೆಯಲ್ಲಿ ನಡೆದಿದೆ. ಈ ಸಂಬಂಧ ಮೂವರ ವಿರುದ್ಧ ಮೊಕದ್ದಮೆ ದಾಖಲು ಮಾಡಲಾಗಿದೆ.
ಲಕ್ಕವಳ್ಳಿ ಪೊಲೀಸ್ ಠಾಣೆ ಉಪ ನಿರೀಕ್ಷಕ ಸಚಿನ್ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.
ಮಂಜನಾಯ್ಕ್ ಎಂಬುವವರು ಬೆಳಗ್ಗೆ ಸುಮಾರು 10.50ರ ವೇಳೆಗೆ ಮತಗಟ್ಟೆಯ ಬಳಿ ಪಾನಮತ್ತರಾಗಿ ಬಂದು ಮತದಾನಕ್ಕೆ ಬರುವವರಿಗೆ ಮನಸ್ಸಿಗೆ ಬಂದಂತೆ ಅವಾಚ್ಯ ಶಬ್ಧಗಳಿಂದ ಬೈಯುತ್ತಿದ್ದರು.
ಆಗ ಸ್ಥಳಕ್ಕೆ ಬಂದ ಸಚಿನ್ಕುಮಾರ್ ಹಾಗೂ ಸಿಬ್ಬಂದಿ ಅವರನ್ನು ಮನೆಯತ್ತ ಕಳುಹಿಸುವ ವೇಳೆಗೆ ಪೊಲೀಸರ ಮತ್ತು ಗ್ರಾಮಸ್ಥರ ನಡುವೆ ಪರಸ್ಪರ ತಳ್ಳಾಟ ನಡೆದಿರುವುದಿಲ್ಲದೆ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆಗ ಮತಗಟ್ಟೆ ಅಧಿಕಾರಿಗಳಿಗೂ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಮಂಜನಾಯ್ಕ, ಗೋಪ್ಯಾನಾಯ್ಕ, ದೇವ್ಲನಾಯ್ಕ ವಿರುದ್ಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

