ಚಿಕ್ಕಮಗಳೂರು

ಜಿಲ್ಲೆಯಲ್ಲಿ ಶೇ.75 ಮತದಾನ

Published On :

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶೇ. 75 ರಷ್ಟು ಮತದಾನವಾಗಿದೆ. ಶೃಂಗೇರಿ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ, ಶೇ. 82 ರಷ್ಟು ಮತದಾನವಾಗಿದ್ದರೆ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 65 ರಷ್ಟು ಮತದಾನವಾಗಿದೆ. ಮೂಡಿಗೆರೆ ಕ್ಷೇತ್ರದಲ್ಲಿ ಶೇ. 72, ಕಡೂರು- ಶೇ. 75, ತರೀಕೆರೆ- ಶೇ. 73 ರಷ್ಟು ಮತದಾನ ನಡೆದಿದೆ. ಬೆಳಿಗ್ಗೆ ಚುರುಕಾಗಿದ್ದ ಮತದಾನ, ಮಧ್ಯಾಹ್ನ ಮಂದಗತಿಯಲ್ಲಿ ನಡೆಯಿತು. ಸಂಜೆ ಮಲೆನಾಡಿನಲ್ಲಿ ಮಳೆ ಮತ್ತು ಗುಡುಗಿನ ವಾತಾವರಣದಿಂದಾಗಿ ಮತದಾರರು ಮತಗಟ್ಟೆಗೆ ಬರಲು ತುಂಬಾ ತ್ರಾಸಾಯಿತು.
ಮಳೆ ಅಡ್ಡಿ: ಮಧ್ಯಾಹ್ನ ಮತದಾನದ ಸ್ಥಿತಿ ನೋಡಿದರೆ ನಿರೀಕ್ಷೆಯಷ್ಟು ಮತದಾನವಾಗುವುದು ಅನುಮಾನ ಎನ್ನುವಂತ ಪರಿಸ್ಥಿತಿ ಇತ್ತು. ಆದರೆ, ಸಂಜೆ ವೇಳೆಗೆ ಮತದಾನದ ಸರಾಸರಿ ಪ್ರಮಾಣ ಏರಿಕೆಯಾಗಿದೆ. ಸಂಜೆ 6 ಗಂಟೆಗೆ ಮತದಾನ ಮುಗಿದರೂ ಮಲೆನಾಡಿನಲ್ಲಿ ಮಳೆಯಾಗುತ್ತಿರುವುದರಿಂದ ಮತಗಟ್ಟೆ ಕೇಂದ್ರಗಳಿಂದ ಚುನಾವಣಾ ಸಿಬ್ಬಂದಿಗಳಿಗೆ ಬರಲು ತುಂಬಾ ಅಡಚಣೆಯಾಗಿತ್ತು.   2004 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಡೆದ ಮತದಾನಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮತದಾನದ ಪ್ರಮಾಣ ಅಧಿಕವಾಗಿದೆ.
ಸ್ವೀಪ್ ಯಶಸ್ವಿ: ಮತದಾನದ ಪ್ರಮಾಣ ಹೆಚ್ಚಳ ಮಾಡಲು ರಾಜ್ಯ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರಲ್ಲಿ ಜಾಗೃತಿ ಮೂಡಿಸಿತು. ಈ ಚುನಾವಣೆಯಲ್ಲಿ ಸರಾಸರಿ ಶೇ.75 ಮತದಾನ ನಡೆದಿರುವುದು ಉತ್ತಮ ಬೆಳವಣಿಗೆಯಾಗಿದೆ. ಮತದಾರರಲ್ಲಿ ಮತದಾನದ ಬಗ್ಗೆ ಅರಿವು ಉಂಟಾಗಿದೆ ಎಂಬುದು ಈ ಮೂಲಕ ಕಂಡು ಬರುತ್ತದೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.