ಚಿಕ್ಕಮಗಳೂರು

ಶೇಕಡ 100 ಫಲಿತಾಂಶ

Published On :

ಕ.ಪ್ರ.ವಾರ್ತೆ, ಕಡೂರು, ಮೇ 6
ಈ ಭಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡೂರು ಪಟ್ಟಣದ ದೀಕ್ಷಾ ವಿದ್ಯಾ ಮಂದಿರವು ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುವ ಮೂಲಕ 21 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.                  ಕಳೆದ ಸಾರಿಯಂತೆ ಈ ಭಾರಿಯೂ ಶೇ.100ರಷ್ಟು ಫಲಿತಾಂಶ ಉಳಿಸಿಕೊಂಡು ಬಂದಿರುವ ಈ ಶಾಲೆಯಲ್ಲಿ ಈ ಭಾರಿ 42 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಕಡೂರು ಪಟ್ಟಣದ ಶಾಲೆಯ ವಿದ್ಯಾರ್ಥಿನಿ ಕೆ.ಎಂ. ಮಾನಸ ರವರು 607 ಮತ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಬಗ್ಗೆ ವಿವರ ನೀಡಿದ ಶಾಲೆಯ ಪ್ರಾಂಶುಪಾಲರಾದ ನವೀನ್ ಡಿ. ಅಲ್ಮೆಡಾ ಮಾಹಿತಿ ನೀಡಿ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳ ಶ್ರದ್ಧೆ, ಆಸಕ್ತಿ ಮತ್ತು ಭೋಧಕರ ಶ್ರಮದಿಂದಾಗಿ ಶೇಕಡಾ ನೂರರಷ್ಟು ಫಲಿತಾಂಶ ಪಡೆಯುವಲ್ಲಿ ಯಶಸ್ವಿಯಾಗಿದೆ. ಪರೀಕ್ಷೆಗೆ ಕುಳಿತಿದ್ದ 42 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಓರ್ವ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣನಾಗುವ ಮೂಲಕ ಶೇ 100 ಫಲಿತಾಂಶ ಬಂದಿದೆ. ರಾಜಣ್ಣ, ಮಂಜುನಾಥ ಪ್ರಸನ್ನ, ಪ್ರಶಾಂತ್ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.