ಮಲ್ಲಿಕಾರ್ಜುನ್ಗೆ ಗೆಲವು ಖಚಿತ
ಕ.ಪ್ರ.ವಾರ್ತೆ, ಕಡೂರು, ಮೇ 6
ಕಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಮಲ್ಲಿಕಾರ್ಜುನ್ ಅಧಿಕ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೆ.ಎಸ್. ಆನಂದ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ನ ಸರ್ವ ಸಮ್ಮತ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಪಕ್ಷದ ನಿಷ್ಕಳಂಕ ವ್ಯಕ್ತಿಯಾಗಿರುವ ಕೆ.ಬಿ. ಮಲ್ಲಿಕಾರ್ಜುನ್ ಅವರನ್ನು ಮೇ 5 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಸಮುದಾಯಗಳೂ ಕೂಡ ಅವರನ್ನು ಬೆಂಬಲಿಸುವ ಮೂಲಕ ಅತಿ ಹೆಚ್ಚಿನ ಮತಗಳನ್ನು ನೀಡಿದ್ದಾರೆ.
ವಿಶ್ವಾಸವಿಟ್ಟು ಮತ: ಕೆಬಿಎಂ ರವರ ಪ್ರಾಮಾಣಿಕತೆ ಜನಪರವಾಗಿರುವ ಪಕ್ಷದ ತತ್ವ ಮತ್ತು ಸಿದ್ಧಾಂತಗಳಿಗೆ ತಕ್ಕಂತೆ ನಡೆದುಕೊಳ್ಳುವ ಅವರ ಗುಣದಿಂದ ಎಲ್ಲ ವರ್ಗದ ಜನರು ಅವರ ಮೇಲೆ ವಿಶ್ವಾಸವಿಟ್ಟು ಮತ ನೀಡಿದ್ದಾರೆ.
ಸಿದ್ದರಾಮಯ್ಯನವರು ಮುಂದಿನ ಮುಖ್ಯಮಂತ್ರಿ ಎಂದು ಈಗಗಾಲೇ ಬಿಂಬಿತವಾಗಿರುವ ಹಿನ್ನೆಲೆಯಲ್ಲಿಯೂ ಕೂಡ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಪರಿಶಿಷ್ಟ ವರ್ಗ ಮತ್ತು ಪಂಗಡದ ಮತದಾರರು ಸೇರಿದಂತೆ ಎಲ್ಲ ವರ್ಗಗಳೂ ಕೂಡ ಕೆ.ಬಿ. ಮಲ್ಲಿಕಾರ್ಜುನ್ರವರ ಪರವಾಗಿ ಮತ ಚಲಾಯಿಸಿದ್ದಾರೆ ಎಂದರು.
ಕಾಂಗ್ರೆಸ್ನಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದ ಮುಖಂಡ ಸಿದ್ದರಾಮಯ್ಯ, ಡಾ ಜಿ. ಪರಮೇಶ್ವರ್, ಶಾಮನೂರು ಶಿವಶಂಕರಪ್ಪ, ಜಾಫರ್ ಷರೀಫರಂತಹ ನಾಯಕರು ಇರುವುದರಿಂದ ಅವರ ಜನಪರ ಚಿಂತನೆ ಕೂಡ ಕಡೂರು ಕ್ಷೇತ್ರದಲ್ಲಿ ಪ್ರಭಾವ ಬೀರುವ ಮೂಲಕ ಎಲ್ಲ ವರ್ಗಗಳ ಸೇರಿ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಮಲ್ಲಿಕಾರ್ಜುನ್ರ್ವರಿಗೆ ಬೆಂಬಲ ನೀಡಿ ಆಶೀರ್ವಾದ ಮಾಡಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

