ನರಸಿಂಹರಾಜಪುರ: ಶೇ.85.66 ಫಲಿತಾಂಶ
ನರಸಿಂಹರಾಜಪುರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಶೇ.85.66ರಷ್ಟು ಫಲಿತಾಂಶ ದೊರಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಹಾಗೂ ಎಸ್ಎಸ್ಎಲ್ಸಿ ಪರೀಕ್ಷಾ ನೋಡಲ್ ಅಧಿಕಾರಿ ಕೆ. ಮೌನೇಶ್ವರಾಚಾರ್ ತಿಳಿಸಿದ್ದಾರೆ.
ತಾಲೂಕಿನ ಒಟ್ಟು 21 ಪ್ರೌಢಶಾಲೆಗಳಲ್ಲಿ 985 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 832 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶೇ 3.5ರಷ್ಚು ಹೆಚ್ಚಳವಾಗಿದೆ. 21 ಪ್ರೌಢಶಾಲೆಗಳ ಪೈಕಿ ತಾಲೂಕಿನ 4 ಪ್ರೌಢಶಾಲೆಗಳಿಗೆ ಶೇ.100 ಫಲಿಂತಾಂಶ ಬಂದಿದೆ.
ನರಸಿಂಹರಾಜಪುರ ಪಟ್ಟಣದ ಡಿಸಿಎಂಸಿ ಶಾಲೆ, ಜೀವನಜ್ಯೋತಿ ಪ್ರೌಢಶಾಲೆ, ಬಾಳೆಹೊನ್ನೂರಿನ ನಿರ್ಮಲಾ ಕಾನ್ವೆಂಟ್ ಆಂಗ್ಲ ಮಾದ್ಯಮ ಪ್ರೌಢಶಾಲೆ ಹಾಗೂ ಓಲಿ ಪ್ರೋಫೆಟ್ ಪ್ರೌಢಶಾಲೆಯು ಶೇ.100 ಫಲಿತಾಂಶ ತಂದು ಕೊಟ್ಟ ಪ್ರೌಢಶಾಲೆಗಳಾಗಿವೆ ಎಂದು ತಿಳಿಸಿದರು.
ಕೆ.ಪಿ. ಸುಜಿತ್ ಪ್ರಥಮ: ನರಸಿಂಹರಾಜಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸುಜಿತ್ 607 (ಶೇ.97) ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಜೀವನ್ ಜ್ಯೋತಿ ಪ್ರೌಢಶಾಲೆಯ ಎ.ವಿ. ಸುಷ್ಮ 603 ಅಂಕ ಪಡೆದು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ನರಸಿಂಹರಾಜಪುರ ಸರ್ಕಾರಿ ಪ್ರೌಢ ಶಾಲೆಯ ಎಸ್.ಕೆ. ಶಶಿಧರ್ 597 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

