ತರೀಕೆರೆ ಶೇ.78.08
ಕ.ಪ್ರ.ವಾರ್ತೆ, ತರೀಕೆರೆ, ಮೇ 7
ಈ ಭಾರಿ ಪ್ರಕಟಗೊಂಡ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ತಾಲೂಕಿನಲ್ಲಿ ಒಟ್ಟು 2409 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅದರಲ್ಲಿ 1881 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.78.08 ರಷ್ಟು ಫಲಿತಾಂಶ ದೊರೆಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್.ಪರಮೇಶ್ವರಪ್ಪ ತಿಳಿಸಿದ್ದಾರೆ.
ಶೇ.100: ಸರ್ಕಾರಿ ಪ್ರೌಢಶಾಲೆಗಳ ಪೈಕಿ ಸರ್ಕಾರಿ ಉರ್ದು ಪ್ರೌಡಶಾಲೆ ಅಜ್ಜಂಪುರ, ಮುರಾರ್ಜಿ ವಸತಿ ಶಾಲೆ ಬಾವಿಕೆರೆ ಮತ್ತು ಖಾಸಗಿ ಪ್ರೌಡಶಾಲೆಗಳ ಪೈಕಿ ಶ್ರೀ ರುದ್ರೇಶ್ವರ ಪ್ರೌಢಶಾಲೆ, ಹಿರೇಕಾನವಂಗಲ, ಅಮೃತೇಶ್ವರ ಪ್ರೌಢ ಶಾಲೆ ನೇರಲೆಕೆರೆ, ಶ್ರೀ ಬಸವೇಶ್ವರ ಪ್ರೌಡಶಾಲೆ ಲಕ್ಷ್ಮೀಸಾಗರ ಶಾಲೆಗಳಿಗೆ ಶೇ.100 ರಷ್ಟು ಫಲಿತಾಂಶ ದೊರಕಿದೆ. ಆದರೆ ಜುಂಜಪ್ಪ ಪ್ರೌಢಶಾಲೆ ಭಕ್ತನಕಟ್ಟೆ ಶೇ.35ರಷ್ಟು ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಥಮ ಸ್ಥಾನ- ಅಜ್ಜಂಪುರ ನೂತನ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ನೇಹ ಅವರು 604 ಅಂಕ ಗಳಿಸಿ ಪ್ರಥಮ ಸ್ಥಾನ ಮತ್ತು ಹಿರೇಕಾನವಂಗಲ ಶ್ರೀ ರುದ್ರೇಶ್ವರ ಪ್ರೌಢ ಶಾಲೆ ವಿದ್ಯಾರ್ಥಿನಿ ಚೈತ್ರ ಸಿ.ವಿ. 601 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ನಿರ್ಮಲಾ ಕಾನ್ವೆಂಟ್
ನರಸಿಂಹರಾಜಪುರ: ಬಾಳೆಹೊನ್ನೂರಿನ ನಿರ್ಮಲಾ ಕಾನ್ವೆಂಟ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ. 62 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 8 ಅತ್ಯುತ್ತಮ, 28 ಪ್ರಥಮ, 13 ದ್ವಿತೀಯ, 13 ತೃತೀಯ ಸ್ಥಾನ ಪಡೆದಿದ್ದಾರೆ. ಶಾಲೆಯ ವಿದ್ಯಾರ್ಥಿನಿ ಅನ್ವಿಕಾ 584 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಕ್ರಮುಖ ಫ್ರೌಢಶಾಲೆ
ಕ.ಪ್ರ.ವಾರ್ತೆ, ಬೀರೂರು, ಮೇ.7
ಬೀರೂರು ಪಟ್ಟಣದ ಕ್ರಮುಖ ಫ್ರೌಢಶಾಲೆ ಶೇ.100ಕ್ಕೆ 100 ಫಲಿತಾಂಶ ಪಡೆದಿದೆ. 2013ರ ಏಪ್ರಿಲ್ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕುಳಿತಿದ್ದ 48 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಮತ್ತು ಒಬ್ಬ ವಿದ್ಯಾರ್ಥಿಯು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ಅತ್ಯುನ್ನತ ಶ್ರೇಣಿಯಲ್ಲಿ ಬಿ.ಎನ್. ರಂಜನ್ (594 ಶೇ 95.04), ಜಿ.ಆರ್. ಧನುಶ್ರೀ (590 ಶೇ 94.4), ಕೆ.ವಿ. ನಯನ (587 ಶೇ 93.92), ಎಚ್. ಎಸ್. ನೀಲಾಂಬಿಕ (587 ಶೇ 93.92)ಅಂಕ ಪಡೆದು ತೇರ್ಗಡೆಯಾಗಿದ್ದು, ನಮ್ಮ ಶಾಲೆಗೆ ಉತ್ತಮ ಫಲಿತಾಂಶ ಬರಲು ಸಹಕರಿಸಿದ ವಿದ್ಯಾರ್ಥಿಗಳಿಗೆ ಮತ್ತು ಕಾರಣಕರ್ತರಾದ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಪೋಷಕರಿಗೆ ಕನ್ನಡ ಸಂಘದ ಅಧ್ಯಕ್ಷರು ಮತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

