ಜಿಲ್ಲೆಯಲ್ಲಿ ಖಾತೆ ತೆರೆಯದ ಕೆಜೆಪಿ
ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಕೆಜೆಪಿ ಸ್ಪರ್ಧಿಸಿತ್ತು. ಆದರೆ, ಒಂದೂ ಕ್ಷೇತ್ರದಲ್ಲೂ ಗೆಲ್ಲಲು ಸಾಧ್ಯವಾಗಲಿಲ್ಲ. ತರೀಕೆರೆ ಹಾಗೂ ಕಡೂರು ಕ್ಷೇತ್ರಗಳಲ್ಲಿ ಕೆಜೆಪಿ ಅಭ್ಯರ್ಥಿಗಳು ಎರಡನೇ ಸ್ಥಾನದಲ್ಲಿದ್ದರೆ, ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಡುವಂತಾಯಿತು.
ಮಾಜಿ ಸಿಎಂ ಯಡಿಯೂರಪ್ಪ ಅವರು ತರೀಕೆರೆ ಮತ್ತು ಕಡೂರು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ತರೀಕೆರೆ ಕ್ಷೇತ್ರದಿಂದ ಕೆಜೆಪಿಯಿಂದ ಸ್ಪರ್ಧೆ ಮಾಡಿದ್ದ ಡಿ.ಎಸ್. ಸುರೇಶ್ ಅವರು 34918 ಮತಗಳನ್ನು ಪಡೆದು, 899 ಮತಗಳ ಅಂತರದಿಂದ ಸೋಲು ಕಂಡಿದ್ದರೆ, ಕಡೂರು ಕ್ಷೇತ್ರದಲ್ಲಿ ಕೆಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ ಅವರು 42433 ಮತಗಳ ಅಂತರದಿಂದ ಸೋತಿದ್ದಾರೆ. ಚಿಕ್ಕಮಗಳೂರು ಕೆಜೆಪಿ ಅಭ್ಯರ್ಥಿ ವೇದಮೂರ್ತಿ ಪಡೆದ ಮತಗಳು ಕೇವಲ 3541 ಮಾತ್ರ. ಜಿಲ್ಲೆಯಲ್ಲಿ ಕೆಜೆಪಿಗೆ ಒಂದೂ ಸ್ಥಾನವು ಬರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

