ಚಿಕ್ಕಮಗಳೂರು

ಬಿಜೆಪಿಯ ವಿಜಯೋತ್ಸವ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮೇ 8
ಮತ ಎಣಿಕೆ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿತ್ತು. ಆದರೂ ಕೂಡ ರಾಜಕೀಯ ಪಕ್ಷಗಳು ಮತ ಎಣಿಕೆ ಕೇಂದ್ರದ ಎದುರು ವಿಜಯೋತ್ಸವ ಆಚರಿಸಿದರು.
ಬೆಳಿಗ್ಗೆ 10 ಗಂಟೆಯ ನಂತರದಲ್ಲಿ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಧ್ವನಿ ವರ್ಧಕದ ಮೂಲಕ ಅಭ್ಯರ್ಥಿಗಳು ಪ್ರತಿ ಸುತ್ತಿನಲ್ಲಿ ಪಡೆಯುತ್ತಿರುವ ಮತಗಳ ವಿವರಣೆ ನೀಡುವಂತೆ ಆಗ್ರಹಿಸಿದ ಮೇರೆಗೆ ಮಾಹಿತಿಯನ್ನು ನೀಡಲು ಅಧಿಕಾರಿಗಳು ಮುಂದಾದರು.
ಪ್ರತಿ ಹಂತದ ಎಣಿಕೆಯ ವಿವರ ಪ್ರಕಟಗೊಳ್ಳುತ್ತಿದ್ದಂತೆ ಹೊರ ಭಾಗದಲ್ಲಿ ನಿಂತಿದ್ದ ಕಾರ್ಯಕರ್ತರು ತಮ್ಮ ಅಭ್ಯರ್ಥಿಗಳ ಪರವಾಗಿ ಜೈಕಾರ ಹಾಕುತ್ತಿದ್ದರು. ಸಿ.ಟಿ. ರವಿ ಅವರ ಪ್ರತಿಯೊಂದು ಹಂತದ ಮತ ಎಣಿಕೆಯನ್ನು ಆಲಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಜೈಕಾರ ಹಾಕುತ್ತಿದ್ದರು. ಇನ್ನುಳಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಸಿ.ಟಿ. ರವಿ ಅವರ ಫಲಿತಾಂಶ ಪ್ರಕಟವಾಗುವ ವೇಳೆಗೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪತ್ನಿ ಪಲ್ಲವಿ ರವಿ ಅವರು ಸಿ.ಟಿ. ರವಿ ಅವರನ್ನು ಆಲಿಂಗಿಸಿಕೊಂಡು ಸಂಭ್ರಮಿಸಿದರು.
ಕಣ್ಣೀರು ಹಾಕಿದರು: ಆದರೆ, ಮತ ಎಣಿಕೆ ಕೇಂದ್ರಕ್ಕೆ ಬೆಳಿಗ್ಗೆಯೇ ಬಂದು ಆಸಿನರಾಗಿದ್ದ ರಾಜಕೀಯ ಪಕ್ಷಗಳ ಮುಖಂಡರು ಕಡೆ ಗಳಿಗೆವರೆಗೆ ಉಸಿರು ಬಿಗಿ ಹಿಡಿದುಕೊಂಡು ಕುಳಿತುಕೊಂಡಿದ್ದರು.
ಆರಂಭದಲ್ಲಿ ಮೂಡಿಗೆರೆ ಕ್ಷೇತ್ರದಲ್ಲಿ ಎಂ.ಪಿ. ಕುಮಾರಸ್ವಾಮಿ ಅವರು ಮುನ್ನಡೆ ಸಾಧಿಸಿದರು. ಇದರಿಂದ ಅವರು ಸಹಜವಾಗಿಯೇ ಖುಷಿಯಾಗಿದ್ದರು. ನಂತರದ ಸುತ್ತಿನಲ್ಲಿ ಮತಗಳ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಮಾಧ್ಯಮ ಕೇಂದ್ರದಲ್ಲಿ ಕುಳಿತಿದ್ದ ಜೀವರಾಜ್, ಸುರೇಶ್ ಎದುರು ದುಖಃ ತಡೆಯಲಾಗದೆ ಕಣ್ಣೀರು ಹಾಕಿದರು. ತರೀಕೆರೆ ಕ್ಷೇತ್ರದಿಂದ ಜಯಗಳಿಸಿದ ಶ್ರೀನಿವಾಸ್ ಮತ ಎಣಿಕೆ ಕೇಂದ್ರದಲ್ಲಿ ಗೆಲುವು ಪ್ರಕಟಗೊಳ್ಳುತ್ತಿದ್ದಂತೆ ಅವರ ಕಣ್ಣಿನಲ್ಲಿ ಆನಂದಬಾಷ್ಪ ಸುರಿಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.