ಮತದಾರನ ತೀರ್ಪಿಗೆ ಬದ್ಧ
ಕ.ಪ್ರ.ವಾರ್ತೆ, ಕಡೂರು, ಮೇ 8
ಜನರು ನೀಡಿರುವ ತೀರ್ಪಿಗೆ ಬದ್ಧರಾಗಿದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ನಿಟ್ಟಿನಲ್ಲಿ ಜನರ ತೀರ್ಪನ್ನು ಒಪ್ಪಿಕೊಂಡಿದ್ದು ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಧೃಢವಾಗಿ ಕಟ್ಟಲಾಗುವುದು ಎಂದು ಕಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಬೀರೂರು ದೇವರಾಜು ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ದೇವರಾಜ್, ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ಅನಿವಾರ್ಯವಾಗಿದೆ. ಅದಕ್ಕೆ ತಕ್ಕಂತೆ ಮತದಾರರು ನೀಡುವ ತೀರ್ಪಿಗೆ ಬದ್ಧರಾಗಿ ಜನ ನೀಡಿರುವ ತೀರ್ಪನ್ನು ಸ್ವೀಕರಿಸಿದ್ದೇನೆ. ಬಿಜೆಪಿ ಸರ್ಕಾರದ ಸಾಧನೆಗಳು ಹಾಗೂ ಕಡೂರು ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ವೈ.ಸಿ. ವಿಶ್ವನಾಥ್ ಅವರು ಸರ್ಕಾರದಿಂದ ಕಡೂರು ಕ್ಷೇತ್ರದ ಅಭಿವೃದ್ಧಿಗಾಗಿ ತಂದಿರುವ ಕೋಟ್ಯಂತರ ರೂ. ಅನುದಾನ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಚಾರವು ಜನರಿಗೆ ಸರಿಯಾಗಿ ತಲುಪಲು ವಿಫಲವಾಗಿದ್ದರಿಂದ ಬಿಜೆಪಿ ಪಕ್ಷವು ಸೋಲು ಅನುಭವಿಸಬೇಕಾಯಿತು.
ಸದೃಢವಾಗಿ ಕಟ್ಟುತ್ತೇವೆ: ಆದರೆ, ಈ ಸೋಲನ್ನು ನಾನು ಒಪ್ಪಿಕೊಂಡಿದ್ದು ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಸದೃಢವಾಗಿ ಕಟ್ಟಲಾಗುವುದು. ನಮ್ಮ ಬಿಜೆಪಿಯ ಯಾವುದೇ ಮುಖಂಡರು ಹಾಗು ಕಾರ್ಯಕರ್ತರು ಈ ಸೋಲಿನಿಂದ ದೃತಿಗೆಡಬೇಕಾಗಿಲ್ಲ. ಇದನ್ನು ಆತ್ಮ ವಿಮರ್ಶೆ ಮಾಡಿಕೊಂಡು ಮುಂದಿನ ದಿನಗಳಲ್ಲಿ ಎಲ್ಲರೊಂದಿಗೆ ಸೇರಿ ಪಕ್ಷವನ್ನು ಬಲವಾಗಿ ಕಟ್ಟಲಾಗುವುದು ಕಾರ್ಯಕರ್ತರು ಮುಖಂಡರು ದೃತಿಗೆಡುವುದು ಬೇಡ ಎಂದು ಹೇಳಿದರು.
ನೂತನ ಶಾಸಕರಾಗಿ ಆಯ್ಕೆಯಾಗಿರುವ ವೈ.ಎಸ್.ವಿ. ದತ್ತರವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ ದೇವರಾಜು, ಕ್ಷೇತ್ರದ ಮತದಾರರು ದತ್ತರವರ ಪರವಾಗಿ ತೀರ್ಪು ನೀಡಿರುವುದರಿಂದ ಕ್ಷೇತ್ರದ ಜನಪ್ರತಿನಿಧಿಯಾಗಿ ಅವರು ಆಯ್ಕೆಯಾಗಿದ್ದು ಅವರನ್ನು ಅಭಿನಂದಿಸುತ್ತೇನೆ. ಶಾಸಕರಾಗಿದ್ದ ಡಾ ವೈ.ಸಿ. ವಿಶ್ವನಾಥ್ ರವರು ಕ್ಷೇತ್ರಕ್ಕೆ ಮಾಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳನ್ನು ದತ್ತರವರು ಮುಂದುವರಿಸುವ ಮೂಲಕ ಕ್ಷೇತ್ರದ ಜನರ ಅಭಿವೃದ್ಧಿಗಾಗಿ ದುಡಿಯುವಂತೆ ಮನವಿ ಮಾಡಿ ಶುಭ ಹಾರೈಸುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

