ಚಿಕ್ಕಮಗಳೂರು

ಕಡೂರಲ್ಲಿ ವ್ಯಕ್ತಿ ಆಧಾರಿತ ರಾಜಕಾರಣ: ಟೀಕೆ

Published On :

ಬೀರೂರು: ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ವ್ಯಕ್ತಿ ಆಧಾರಿತ ರಾಜಕಾರಣಕ್ಕೆ ಆದ್ಯತೆ ನೀಡುವ ಮೂಲಕ ಜನಪ್ರತಿನಿಧಿಯನ್ನು ಚುನಾಯಿಸಿದ್ದರಿಂದ ಕಾಂಗ್ರೆಸ್ ಹಿನ್ನೆಡೆಗೆ ಕಾರಣವಾಯಿತು ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹೇಶ್ ಒಡೆಯರ್ ಹೇಳಿದರು.                                                              
 ಅವರು ಬೀರೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಕಡೂರು ಕ್ಷೇತ್ರದ ಹಲವು ಭಾಗಗಳಲ್ಲಿ ಕಾಂಗ್ರೆಸ್ ಗೆಲವಿನ ಸಮೀಪದಲ್ಲಿ ಸೋತಿದ್ದರೂ ಉತ್ತಮ ಸಾಧನೆ ಮಾಡಿದೆ. ಪಕ್ಷದ ಅಭ್ಯರ್ಥಿಯಾಗಿದ್ದ ಕೆ.ಬಿ. ಮಲ್ಲಿಕಾರ್ಜುನ್ ಅವರಿಗೆ ಮತದಾರರು ಹೆಚ್ಚಿನ ಮತಗಳನ್ನು ನೀಡಿದ್ದಾರೆ. ಅದೇ ರೀತಿ ಜಿಲ್ಲೆಯಲ್ಲಿ ಸ್ಪರ್ಧಿಸಿದ್ದ ಇತರೆ ಕಾಂಗ್ರೆಸ್ ಅಭ್ಯರ್ಥಿಗಳಿಗೂ ಉತ್ತಮ ಮತ ನೀಡಿದ್ದಾರೆ ಎಂದು ಕೃತಜ್ಞತೆ ಅರ್ಪಿಸಿದರು.
ವ್ಯಕ್ತಿ ಆಧಾರಿತ ರಾಜಕೀಯ: ಮಾಧ್ಯಮಗಳ ಸಮೀಕ್ಷೆಗಳಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಬಹುಮತದ ಸರ್ಕಾರ ರಚನೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ಯಾವುದೇ ತೊಡಕಾಗುವುದಿಲ್ಲ.
   ಕಡೂರು ಕ್ಷೇತ್ರದಲ್ಲಿ ವ್ಯಕ್ತಿ ಆಧಾರಿತ ರಾಜಕಾರಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಜನಪ್ರತಿನಿಧಿಯನ್ನು ಆಯ್ಕೆ ಮಾಡಿದ್ದು ಕಾಂಗ್ರೆಸ್ ಹಿನ್ನಡೆಗೆ ಕಾರಣವಾಗಿದೆ ಅಷ್ಟೇ ಎಂದರು.
 ಈ ಸೋಲು ಮುಂಬರಲಿರುವ ಲೋಕಸಭೆ, ತಾಲೂಕು ಮತ್ತು ಜಿಲ್ಲಾ ಪಂಚಾಯಿ ಚುನಾವಣೆಗಳ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ.  ಕಾಂಗ್ರೆಸ್ ಅಭ್ಯರ್ಥಿ ಗೆಲವಿಗೆ ಹಲವಾರು ಮುಖಂಡರು, ಸಾವಿರಾರು ಕಾರ್ಯಕರ್ತರು ಶ್ರಮಿಸಿದ್ದು ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಹಜವಾಗಿದ್ದು, ಜನರು ನೀಡಿರುವ ತೀರ್ಪಿಗೆ ತಲೆಬಾಗುವ ಮೂಲಕ ಸೋಲಿನಿಂದ ದೃತಿಗೆಡದೆ ಪಕ್ಷವನ್ನು ಸಂಘಟಿಸುವ ಕೆಲಸವನ್ನು ಕಾರ್ಯಕರ್ತರೊಡಗೂಡಿ ಮಾಡಲಾಗುವುದು ಎಂದರು.
ಸಮಾನ ಅನುದಾನ: ಭಿನ್ನಾಭಿಪ್ರಾಯ ಜಾತಿ ಭೇದ ಮರೆತು ಎಲ್ಲರೂ ಒಟ್ಟಿಗೆ ಶ್ರಮಿಸಿ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಧಿಪತ್ಯವನ್ನು ಸ್ಥಾಪಿಸಿ ಜನರಲ್ಲಿ ಕಾಂಗ್ರೆಸ್ ಬಗ್ಗೆ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತೇವೆ.
    ಅಭಿವೃದ್ದಿ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡದೆ ಕ್ಷೇತ್ರದ ಎಲ್ಲ ಭಾಗಗಳಿಗೆ ಸಮರ್ಪಕ ಅನುದಾನ ಬಿಡುಗಡೆಗೊಳಿಸಿ ಉತ್ತಮ ಕಾರ್ಯ ಕೈಗೊಳ್ಳಲಿ ಎಂಬುದು ಕಾಂಗ್ರೆಸ್ ಆಶಯವಾಗಿದೆ ಎಂದ ಒಡೆಯರ್, ಪಕ್ಷದ ಕಾರ್ಯಕರ್ತರು ಸೋಲಿಗೆ ದೃತಿಗೆಡದೆ ಸರ್ಕಾರದ ನೆರವಿಂದ ಉತ್ತಮ ಕೆಲಸ ಮಾಡುವ ಜವಬ್ದಾರಿ ಹೊರಬೇಕು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.