ಚಿಕ್ಕಮಗಳೂರು

ಬಸವೇಶ್ವರ ಜಯಂತಿ ಪೂರ್ವಭಾವಿ ಸಭೆ

Published On :

ನರಸಿಂಹರಾಜಪುರ: ಮೇ 13ರ ಸೋಮವಾರ ನಡೆಯಲಿರುವ ಬಸವೇಶ್ವರ ಜಯಂತಿ ಕಾರ್ಯಕ್ರಮ ಆಚರಿಸುವ ಬಗ್ಗೆ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪೂರ್ವಭಾವಿ ಸಭೆಯು ಗುರುವಾರ ನಡೆಯಿತು.
   ಈ ಬಾರಿ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ನಡೆಸಲು ಸಭೆ ತೀರ್ಮಾನಿಸಿತು. ಸಭಾ ಕಾರ್ಯಕ್ರಮದ ನಂತರ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು, ಹಂಪಲು ವಿತರಿಸಲಾಗುವುದು.
   ಸಭೆಯ ಅಧ್ಯಕ್ಷತೆಗೆ ಶಾಸಕ ಡಿ.ಎನ್. ಜೀವರಾಜ್ ಅವರನ್ನು ಆಹ್ವಾನಿಸುವುದು.
ಬಸವ ಕೇಂದ್ರದ ಸಂಚಾಲಕ ಪುಟ್ಟಸ್ವಾಮಿ ಅವರಿಂದ ಉಪನ್ಯಾಸ ಏರ್ಪಡಿಸುವುದು ಹಾಗೂ ವಚನ ಗಾಯನ ಕಾರ್ಯಕ್ರಮ ನಡೆಸಲು ಸಭೆಯ್ಲಲಿ ತೀರ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ತಹಸೀಲ್ದಾರ್ ಕೃಷ್ಣಮೂರ್ತಿ ವಹಿಸಿದ್ದರು. ಸಭೆಯಲ್ಲಿ ಬಸವ ಸಮಿತಿ ಅಧ್ಯಕ್ಷ ಶಾಂತರಾಜ್, ತಾಲೂಕು ದೈಹಿಕ ಪರಿವೀಕ್ಷಕ ಕೆ. ಮೌನೇಶ್ವರಾಚಾರ್, ಸಿಡಿಪಿಓ ಜ್ಯೋತಿಲಕ್ಷ್ಮಿ,ತಾಲೂಕು ಪಂಚಾಯ್ತಿಯ ರಾಜೇಗೌಡ, ಪೊಲೀಸ್ ಠಾಣಾಧಿಕಾರಿ ಜಯ, ವಲಯ ಅರಣ್ಯಾಧಿಕಾರಿ ಕೇಶವಮೂರ್ತಿ ಮುಂತಾದವರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.