ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮೇ 10
ಚಿಕ್ಕಮಗಳೂರು ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಗಿರಿಜನ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳು ಹಾಗೂ ಗಿರಿಜನ ಆಶ್ರಮ ಶಾಲೆ ಪ್ರವೇಶಕ್ಕೆ 5 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಚಿಕ್ಕಮಗಳೂರಿನ ಬ್ಯಾಲೈನ್ ರಸ್ತೆಯ ಪ್ರಿ-ಮೆಟ್ರಿಕ್ ಬಾಲಕಿಯರ ವಿದ್ಯಾರ್ಥಿನಿಲಯ, ಕೊಲ್ಲಾಪುರದಮ್ಮ ದೇವಸ್ಥಾನದ ರಸ್ತೆಯ ಪ್ರಿ-ಮೆಟ್ರಿಕ್ ಬಾಲಕರ ವಿದ್ಯಾರ್ಥಿನಿಲಯ, ಕೆ.ಬಿ. ಹಾಳ್, ಆಣೂರು, ಲಕ್ಯಾ ಹಾಗೂ ಸಂಗಮೇಶ್ವರಪೇಟೆಯ ಪ್ರಿ-ಮೆಟ್ರಿಕ್ ಬಾಲಕರ ವಿದ್ಯಾರ್ಥಿನಿಲಯ, ಕೆಳಗೂರಿನ ಪ್ರಿ-ಮೆಟ್ರಿಕ್ ಬಾಲಕಿಯರ ವಿದ್ಯಾರ್ಥಿನಿಲಯ, ತುಡುಕೂರು (ಆಲ್ದೂರು) ಗಿರಿಜನ ಆಶ್ರಮ ಶಾಲೆ (1 ರಿಂದ 5ನೇ ತರಗತಿಯವರೆಗೆ) ವಿದ್ಯಾರ್ಥಿನಿಲಯಗಳಲ್ಲಿ ಸೇರ್ಪಡೆಗೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಜೂ. 7 ಕೊನೆಯದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ವಿದ್ಯಾರ್ಥಿನಿಲಯ ಅಥವಾ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ, ಚಿಕ್ಕಮಗಳೂರು ಸಂಪರ್ಕಿಸಲು ತಿಳಿಸಿದೆ.
ಅರ್ಜಿ ಆಹ್ವಾನ
ಚಿಕ್ಕಮಗಳೂರು: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನ ಪ್ರಥಮ ಮೂಲ ತರಗತಿ, ಪ್ರಥಮ ಬಿ.ಎಫ್.ಎ.ಗೆ ಪ್ರಸ್ತುತ ಶೈಕ್ಷಣಿಕ ವರ್ಷದ ಸೇರ್ಪಡೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ. 4 ಕೊನೆಯ ದಿನವಾಗಿದ್ದು, ಜೂ. 11 ರಂದು ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ 2 ಗಂಟೆಗೆ ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡೀನ್, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಯ್ಯಾಜಿರಾವ್ ರಸ್ತೆ, ಮೈಸೂರು. ದೂರವಾಣಿ ಸಂಖ್ಯೆ- 0821 2438931 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ವಿಠಲರಾವ್ ನಿಧನಕ್ಕೆ ಸಂತಾಪ
ಚಿಕ್ಕಮಗಳೂರು:ದತ್ತಪೀಠದ ಸಂವರ್ಧನಾ ಸಮಿತಿ ಮುಖಂಡರು ಹಾಗೂ ಸಂಘ ಪರಿವಾರದ ಹಿರಿಯ ಮುಖಂಡರೂ ಆದ ಬಿ.ಎಸ್. ವಿಠಲರಾವ್ ನಿಧನಕ್ಕೆ ಶಾಸಕ ಸಿ.ಟಿ. ರವಿ ಸಂತಾಪ ಸೂಚಿಸಿದ್ದಾರೆ. ಮೊದಲು ಜನ ಸಂಘ ಸ್ಥಾಪನೆಯಾದ ಬಳಿಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಘವನ್ನು ಬೆಳೆಸಲು ಕಾರಣರಾಗಿ ಶಿಸ್ತಿನ ಸಿಪಾಯಿಯಾಗಿದ್ದರು. ವಿಶ್ವಹಿಂದು ಪರಿಷತ್ತಿನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ
ದತ್ತಪೀಠ ಹೋರಾಟ ಸ್ವರೂಪಕ್ಕೆ ಕಾನೂನು ಬದ್ಧ ಕರಾರುವಕ್ಕಾದ ಅಂಕಿ ಅಂಶಗಳನ್ನು ಒದಗಿಸಿ ಅಧಿಕೃತ ವಕ್ತಾರರಾಗಿ ಶ್ರಮಿಸಿ ದತ್ತಪೀಠ ಸಂವರ್ಧನಾ ಸಮಿತಿ ಸಂಚಾಲಕರಾಗಿ ನಿರ್ವಹಿಸಿದ ಸೇವೆ ಸ್ಮರಣೀಯ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

