ಚಿಕ್ಕಮಗಳೂರು

ಮೂರ್ತಿ ಹತಾಶ ಹೇಳಿಕೆ: ಟೀಕೆ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮೇ 11
 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಅವರು, ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಈ ಪಕ್ಷದ ಕಾರ್ಯಕರ್ತರನ್ನು ನೋಡಿದರೆ ಕಾಂಗ್ರೆಸ್‌ನಲ್ಲಿ ಈ ರೀತಿ ಕಾರ್ಯಕರ್ತರು ಇಲ್ಲ. ಆದ್ದರಿಂದ ಜೆಡಿಎಸ್ ಸೇರಬೇಕೆಂಬ ಆಸೆ ಆಗುತ್ತಿದೆ ಎಂದು ಹೇಳಿದ್ದನ್ನು ಮರೆತಂತೆ ಕಾಣುತ್ತಿದೆ ಎಂದು ಜೆಡಿಎಸ್ ಮುಖಂಡ ದೇವರಾಜ್ ತಿರುಗೇಟು ನೀಡಿದ್ದಾರೆ.  
ಜೆಡಿಎಸ್ ಡಸ್ಟ್‌ಬಿನ್ ಎಂದು ಮೂರ್ತಿ ಟೀಕೆ ಮಾಡಿವುದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಮೂರ್ತಿ ಅವರ ಈ ಹೇಳಿಕೆ ಹತಾಶೆ ಭಾವನೆಯನ್ನು ತೋರಿಸುತ್ತದೆ ಎಂದರು.
ಜಿಲ್ಲೆಯಲ್ಲಿ ಕಡೂರು ಮತ್ತು ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಜೆಡಿಎಸ್‌ನಿಂದ ಆಮದು ಮಾಡಿಕೊಂಡಿರುವದನ್ನು ಮೂರ್ತಿ ಮರೆತಂತಿದೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ಜತೆ ಹೊಂದಾಣಿಕೆ: ಮೂರ್ತಿ ಅವರು ಬಿಜೆಪಿಯ ಅವ್ಯವಹಾರಗಳ ಬಗ್ಗೆ ಚಕಾರವೆತ್ತದೆ ಚಿಕ್ಕಮಗಳೂರು, ಶೃಂಗೇರಿ ಹಾಗೂ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕರ ಜತೆ ಹೊಂದಾಣಿಕೆ ರಾಜಕೀಯ ಮಾಡಿಕೊಂಡು ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣರಾಗಿದ್ದಾರೆ.
ಕೂಡಲೇ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ, ನೈತಿಕತೆ ಮೆರೆದು, ರಾಜಕೀಯ ಸನ್ಯಾಸತ್ವ ಪಡೆದು ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಕ್ಷಮೆ ಕೇಳಬೇಕು ಎಂದು ದೇವರಾಜ್ ಆಗ್ರಹಿಸಿದ್ದಾರೆ.
ಎಂ.ಎಲ್. ಮೂರ್ತಿಯವರಂತೆ ನಾನು ವಿರೋಧ ಪಕ್ಷಗಳ ಜತೆ ಹೊಂದಾಣಿಕೆ ರಾಜಕೀಯದಿಂದ ಬಂದವನಲ್ಲ. ಒಂದು ಸೈದ್ಧಾಂತಿಕ ನೆಲೆಯಲ್ಲಿ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ.
ಮೂರ್ತಿಯವರ ಹೊಂದಾಣಿಕೆ ರಾಜಕಾರಣ ಕಾಂಗ್ರೆಸ್ ಮುಖಂಡರಿಗೂ ತಿಳಿದಿದೆ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.