ಅರ್ಜಿ ಆಹ್ವಾನ
ನರಸಿಂಹರಾಜಪುರ: ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 6 ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಅರ್ಜಿ ಆಹಗ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಕಾಲೇಜು ವಿದ್ಯಾರ್ಥಿ ನಿಲಯಕ್ಕೆ ಪಿ.ಯು.ಸಿ ಹಾಗೂ ಪದವಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸಲು ಅರ್ಜಿಗಳನ್ನು ಕರೆಯಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ 15.5.2013 ರಿಂದ ಅರ್ಜಿ ವಿತರಿಸಲಾಗುತ್ತದೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳು ಈ ಕಚೇರಿಯಿಂದ ಅರ್ಜಿ ಪಡೆದು ಅರ್ಜಿಯ ಜೊತೆ ಜಾತಿ ಪತ್ರ, ಅಂಕ ಪಟ್ಟಿಯೊಂದಿಗೆ ಈ ಕಚೇರಿಗೆ ಜೂನ್ 6 ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಜೂ. 25 ರಂದು ಪ್ರತಿಭಾ ಪುರಸ್ಕಾರ
ಕೊಪ್ಪ: ತಾಲೂಕು ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾನಿಧಿ ಪ್ರಧಾನ ಸಮಾರಂಭವನ್ನು ಪಟ್ಟಣದ ಗಾಯತ್ರಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.85 ಅಂಕಗಳಿಸಿ ಉತ್ತೀರ್ಣರಾದ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಉದ್ದೇಶಿಸಿರುವುದರಿಂದ ವಿಪ್ರ ವಿದ್ಯಾರ್ಥಿಗಳು ಅಂಕಪಟ್ಟಿ ಮತ್ತು ವಿಳಾಸದ ಸಮೇತರಾಗಿ ಸಂಘವನ್ನು ಸಂಪರ್ಕಿಸಬೇಕಾಗಿದೆ.
ಅಲ್ಲದೇ ವಿಪ್ರ ನೌಕರರ ಅಥವಾ ವಿಪ್ರ ಸಮಾಜದಲ್ಲಿ ಅರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಿಯುಸಿ ನಂತರದ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿಯಿಂದ ಅರ್ಥಿಕ ಸಹಾಯ ನೀಡಲಾಗುವುದು.
ಸಹಾಯವನ್ನು ಅಪೇಕ್ಷಿಸುವರು ಮೇ. 25ರ ಒಳಗೆ ಸಂಘಕ್ಕೆ ಸಂಪರ್ಕಿಸಬೇಕಾಗಿದೆ. ಮಾಹಿತಿಗಾಗಿ 08265-221594, 9449996949 ಸಂಪರ್ಕಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

