ಚಿಕ್ಕಮಗಳೂರು

ಹೆಚ್ಚುತ್ತಿರುವ ಸೈನ್ಸ್ ವಿದ್ಯಾರ್ಥಿಗಳ ಸಂಖ್ಯೆ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮೇ 11
ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಲ್ಲಿ ಪಿಯುಸಿಯಲ್ಲಿ ಸೈನ್ಸ್ ಓದುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.
ಹಿಂದಿನ ವರ್ಷದಲ್ಲಿ ಜಿಲ್ಲೆಯಲ್ಲಿ ಪಿಯುಸಿಯಲ್ಲಿ ಸೈನ್ಸ್‌ಗೆ ಸೇರಿದ್ದ ವಿದ್ಯಾರ್ಥಿಗಳ ಸಂಖ್ಯೆ ಸುಮಾರು 1600 ಇತ್ತು. ಕಳೆದ ವರ್ಷದಲ್ಲಿ ಈ ಸಂಖ್ಯೆ 1984ಕ್ಕೆ ಏರಿದೆ. ಈ ವರ್ಷದಲ್ಲಿ ಇನ್ನು ಹೆಚ್ಚು ವಿದ್ಯಾರ್ಥಿಗಳು ಸೈನ್ಸ್ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಹೇಳಿದೆ.
ಹೈಸ್ಕೂಲ್‌ನಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿರುವ ವಿದ್ಯಾರ್ಥಿಗಳಿಗೆ ಸೈನ್ಸ್ ಎಂದರೆ, ಕಬ್ಬಿಣದ ಕಡಲೆ ಇದ್ದಂತೆ. ಆಂಗ್ಲ ಮಾಧ್ಯಮದಲ್ಲಿ ಹೈಸ್ಕೂಲ್‌ನಲ್ಲಿ ಓದಿರುವ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಸೈನ್ಸ್ ತೆಗೆದುಕೊಳ್ಳಲು ಆಸಕ್ತಿ ತೋರುತ್ತಿದ್ದಾರೆ.
ಕಳೆದ ವರ್ಷ ಜಿಲ್ಲೆಯಲ್ಲಿ 1984 ಸೈನ್ಸ್ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಈ ಪೈಕಿ 1488 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಶೇ. 75 ರಷ್ಟು ಫಲಿತಾಂಶ ಬಂದಿದೆ. ಪಿಯು ಫಲಿತಾಂಶದಲ್ಲಿ ಚಿಕ್ಕಮಗಳೂರು ಜಿಲ್ಲೆ ಶೇ. 78.02 ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಈ ಬಾರಿ 5ನೇ ಸ್ಥಾನ ಪಡೆದುಕೊಂಡಿದೆ.
ಜಿಲ್ಲೆಯಲ್ಲಿ ಒಟ್ಟು 22 ಪಿಯು ಕಾಲೇಜುಗಳಿದ್ದು, ಈ ಪೈಕಿ ಚಿಕ್ಕಮಗಳೂರು ನಗರದ 15 ಕಾಲೇಜುಗಳಲ್ಲಿ ಸೈನ್ಸ್ ಇದೆ. ಇವುಗಳಲ್ಲಿ ಅನುದಾನ ರಹಿತ ಕಾಲೇಜುಗಳ ಸಂಖ್ಯೆ 7,    ಇನ್ನುಳಿದಂತೆ ಅನುದಾನಿತ 4, ಸರ್ಕಾರಿ ಕಾಲೇಜುಗಳ ಸಂಖ್ಯೆ 4.
ಡಿಮ್ಯಾಂಡ್: ನಗರದ ಬೇಲೂರು ರಸ್ತೆಯಲ್ಲಿರುವ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಪಿಯುಸಿಯಲ್ಲಿ ಸೈನ್ಸ್ ಸೇರಲು ತುಂಬಾ ಬೇಡಿಕೆ ಇದೆ. ಆದರೆ, ಅಲ್ಲಿನ ಮೂಲಭೂತ ಸೌಲಭ್ಯಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಸಂಖ್ಯೆಯನ್ನು ಸೀಮಿತಗೊಳಿಸಲಾಗುತ್ತಿದೆ. ಈ ಕಾಲೇಜಿನಲ್ಲಿ ಕಳೆದ ವರ್ಷ ಶೇ. 91 ರಷ್ಟು ಪಿಯುಸಿಯಲ್ಲಿ ಫಲಿತಾಂಶ ಬಂದಿತ್ತು. ಈ ವರ್ಷ ಶೇ. 87 ರಷ್ಟು ಫಲಿತಾಂಶ ಬಂದಿದೆ.
  ಅನುದಾನ ರಹಿತ ಕಾಲೇಜಿನಲ್ಲಿ ಅಭಿವೃದ್ಧಿ ಶುಲ್ಕ, ಟೂಷನ್ ಹೆಸರಿನಲ್ಲಿ ಸಾವಿರಾರು ರುಪಾಯಿ ಸುಲಿಗೆ ಮಾಡಲಾಗುತ್ತಿದೆ. ಅದುದರಿಂದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಕಡಿಮೆ ಶುಲ್ಕ ಇರುವುದರಿಂದ ವಿದ್ಯಾರ್ಥಿಗಳು ಇಲ್ಲಿ ಪ್ರವೇಶ ಪಡೆಯಲು ಮುಗಿ ಬೀಳುತ್ತಿದ್ದಾರೆ.
ಸೈನ್ಸ್ ಕಾಲೇಜುಗಳ ವಿವರ: ಚಿಕ್ಕಮಗಳೂರು ನಗರದಲ್ಲಿ ಒಟ್ಟು 15 ಕಾಲೇಜುಗಳಲ್ಲಿ ಸೈನ್ಸ್ ಇದೆ.
ವಿವರ ಈ ಕೆಳಕಂಡಂತೆ ಇದೆ.
ಗೌರ್ನಮೆಂಟ್ ಜ್ಯೂನಿಯರ್ ಕಾಲೇಜು, ಬೇಲೂರು ರಸ್ತೆ, ಸ್ವತಂತ್ರ ಪದವಿಪೂರ್ವ ಕಾಲೇಜು, ಲಾಲ್ ಬಹದ್ದೂರ್ ಪದವಿಪೂರ್ವ ಕಾಲೇಜು, ಮೋರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜು.
ಡೋನೆಷನ್: ಅನುದಾನಿತ ಕಾಲೇಜುಗಳಿಗೆ ಸರ್ಕಾರ ಶುಲ್ಕ ನಿಗದಿಪಡಿಸಿದೆ. ಅದಕ್ಕಿಂತ ಹೆಚ್ಚು ಡೋನೆಷನ್ ಪಡೆಯುವಂತ್ತಿಲ್ಲ.    ಕಾಲೇಜು ಅಭಿವೃದ್ಧಿ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಕೆಲವು ಕಾಲೇಜುಗಳ ಹಣ ಸುಲಿಗೆ ಮಾಡುತ್ತಿವೆ. ಇನ್ನು ಅನುದಾನ ರಹಿತ ಕಾಲೇಜುಗಳು ಹೈಟೆಕ್ ಶಿಕ್ಷಣದ ಹೆಸರಿನಲ್ಲಿ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹತ್ತು ಪಟ್ಟು ಡೋನೆಷನ್ ಪಡೆಯುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.