ಅಭಿವೃದ್ಧಿಯಿಂದ ಗೆಲವು: ಕಲ್ಮರುಡಪ್ಪ
ಕಡೂರು: ಜಾತಿಗಳ ನಡುವೆ ಗಲಾಟೆ ಮಾಡಿಸುವುದರಿಂದ ಯಾವುದೇ ಪ್ರಯೋಜ ಆಗುವುದಿಲ್ಲ ಎಂಬುದನ್ನು ಅರಿತ ಮತದಾರರು ಕೋಮು ಸಾಮರಸ್ಯ ಕಾಪಾಡಲು ಸಿ.ಟಿ. ರವಿ ಅವರನ್ನು ಮತದಾರರು ಮೂರನೇ ಬಾರಿಗೆ ಆಯ್ಕೆ ಮಾಡಿದ್ದಾರೆ ಎಂದು ಜಿಪಂ ಸದಸ್ಯ ಕಲ್ಮರುಡಪ್ಪ ಹೇಳಿದ್ದಾರೆ.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿಕ್ಕಮಗಳೂರು ಕ್ಷೇತ್ರಕ್ಕೆ ನೀರಾವರಿ ಯೋಜನೆ ಜಾರಿಗೆ ತಂದು ಮತ್ತಷ್ಟು ಅಭಿವೃದ್ಧಿ ಕಾರ್ಯ ಮಾಡುವ ವ್ಯಕ್ತಿ ಬೇಕೆನ್ನುವ ಹಿತದೃಷ್ಟಿಯಿಂದ ಆಯ್ಕೆ ಮಾಡಿದ್ದಾರೆ. ಕಳೆದ ಎರಡು ಅವಧಿಯಲ್ಲಿ ನಮ್ಮ ನಾಯಕರಾದ ಸಿ.ಟಿ. ರವಿಯವರು ಚಿಕ್ಕಮಗಳೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 800ಕ್ಕೂ ಅಧಿಕ ಕೋಟಿ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ ಎಂದರು.
ಅಭಿವೃದ್ಧಿ, ಸಾಮರಸ್ಯ, ವೈಯಕ್ತಿಕ ವ್ಯಕ್ತಿತ್ವ ಇವು ಈ ಬಾರಿಯ ವಿಧಾನಸಭಾ ಚುನಾವಣೆ ಮಾನದಂಡವಾಗಿವೆ. ಈ ನಿಟ್ಟಿನಲ್ಲಿ ಆಗಬೇಕಾಗಿರುವ ನೀರಾವರಿ ಯೋಜನೆಗಳು ಕಾರ್ಯಗತವಾಗಲಿವೆ.
ಯೋಜನೆ ಕುರಿತು ಚರ್ಚೆ: ಸಖರಾಯಪಟ್ಟಣ ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಲಕ್ಯಾದಿಂದ ಕರಡಿ ಗವಿ ಗುಡ್ಡದವರೆಗೆ ಪೈಪ್ಲೈನ್ ಮೂಲಕ ನೀರು ಹರಿಸುವುದು. ಕಾಲುವೆ ಮೂಲಕ ಎಸ್. ಬಿದರೆ, ನಾಗೇನಹಳ್ಳಿ,ನಿಡಘಟ್ಟ, ಸಿಂದಿಗೆರೆಗಳಿಗೆ ನೀರು ಹರಿಸುವ ಯೋಜನೆಯ ಕುರಿತು ಈಗಾಗಲೇ ಜಿಲ್ಲಾ ಪಂಚಾಯ್ತಿ ಸಿಇಒ ರವರ ಜೊತೆ ಮಾತುಕತೆ ನಡೆಸುವ ಮೂಲಕ ಪ್ರಸ್ತಾಪ ಮಾಡಲಾಗಿದ್ದು, ಶೀಘ್ರವೇ ಈ ಯೋಜನೆಗೆ ಚಾಲನೆ ಸಿಗಲಿದೆ ಎಂದು ಹೇಳಿದರು.
ಪಕ್ಷ ಸಂಘಟನೆಗೆ ಪ್ರಯತ್ನ: ಸುರೇಶ್
ತರೀಕೆರೆ: ಜಿಲ್ಲೆ ಮತ್ತು ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚು ಪ್ರಯತ್ನಿಸಲಾಗುವುದು ಎಂದು ಮಾಜಿ ಶಾಸಕ ಡಿ.ಎಸ್. ಸುರೇಶ್ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ನೂತನ ಶಾಸಕರನ್ನು ಅಭಿನಂದಿಸಿದ ಅವರು, ಕ್ಷೇತ್ರದಲ್ಲಿ ಶಾಸಕರು ಕೈಗೊಳ್ಳುವ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳಿಗೆ ತಾವು ಸಂಪೂರ್ಣ ಸಹಕರಿಸುವುದಾಗಿ ತಿಳಿಸಿದರು. ತಮ್ಮ ಸೋಲು ಅನಿರೀಕ್ಷತವಾಗಿದ್ದು, ಮೇ 16 ರಂದು ನೆಡೆಯಲಿರುವ ಸಭೆಯಲ್ಲಿ ಸೋಲಿಗೆ ಕಾರಣಗಳನ್ನು ಚರ್ಚಿಸಲಾಗುವುದು. ಒಳ್ಳೆಯ ಉದ್ದೇಶಗಳಿಗಾಗಿ ಹೋರಾಟ ಮಾಡುತ್ತೇವೆ. ಕ್ಷೇತ್ರದ ಮತದಾರರಿಗೆ ಮತ್ತು ತಮಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿ ರಾಜ್ಯದ ನೂತನ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು. ತಾಲೂಕು ಕೆಜಿಪಿ ಅಧ್ಯಕ್ಷ ರಮೇಶ್, ಬೇಲೇನಹಳ್ಳಿ ಸೋಮಶೇಖರ್, ಟಿ.ಎಸ್. ಯಶೋಧರಮೂರ್ತಿ, ಟಿ.ಜಿ. ಮಂಜುನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

