ಚಿಕ್ಕಮಗಳೂರು

ಇಂದು ಶಂಕರ ಮಹಾ ರಥೋತ್ಸವ

Published On :

ಶೃಂಗೇರಿ: ಪಟ್ಟಣದ ಶಾರದಾ ಪೀಠದ ಸಂಸ್ಥಾಪಕ ಜಗದ್ಗುರು ಶಂಕರಾಚಾರ್ಯರ ಮಹಾರಥೋತ್ಸವ ಗುರುವಾರ ವೈಭವಯುತವಾಗಿ ಜರುಗಲಿದೆ. ಶಂಕರ ಜಯಂತಿ ಅಂಗವಾಗಿ ಮಠದ ಆವರಣದಲ್ಲಿರುವ ಶಂಕರಾಚಾರ್ಯ ದೇವಾಲಯದಲ್ಲಿ ಮೇ 10ರಿಂದ ಪ್ರತಿದಿನ ವಿಶೇಷ ಪೂಜೆ, ಹೋಮ ಹವನ, ಉಪನ್ಯಾಸ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಗಳು ನಡೆಯಿತು. ಗುರುವಾರ ಬೆಳಗ್ಗೆ 10 ಗಂಟೆಗೆ ಮಹಾರಥೋತ್ಸವ ನಡೆಯಲಿದೆ. ಸಂಜೆ  ಜಗದ್ಗುರುಗಳ ಅಧ್ಯಕ್ಷತೆಯಲ್ಲಿ ಸಭೆ, ಅತಿಥಿಗಳ ಉಪನ್ಯಾಸ, ಶ್ರೀಗಳಿಂದ ಅನುಗ್ರಹ ಭಾಷಣ, ವೇದಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ, ವಿದ್ವತ್ಸಮ್ಮಾನ ನಡೆಯಲಿದೆ.
ಬಸ್- ಕಾರು ಡಿಕ್ಕಿ
ಶೃಂಗೇರಿ: ಇಲ್ಲಿನ ಬಿಲಗೆದ್ದೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಕಾರ್ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ. ತೀರ್ಥಹಳ್ಳಿಯತ್ತ ಸಾಗುತ್ತಿದ ಬಸ್, ಶೃಂಗೇರಿಯತ್ತ ಬರುತ್ತಿದ್ದ ಕಾರ್‌ಗೆ ಅಪ್ಪಳಿಸಿದಾಗ ಈ ಘಟನೆ ಸಂಭವಿಸಿದೆ. ಕಾರ್‌ನಲ್ಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.