ಪಠ್ಯೇತರ ಚಟುವಟಿಕೆಗಳಿಗೂ ಗಮನ ಹರಿಸಿ: ನಾರಾಯಣ್
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮೇ 15
ಚಿಕ್ಕಮಗಳೂರು: ವಿದ್ಯಾರ್ಥಿಗಳು ಪಠ್ಯಕ್ರಮಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಿಗೆ ಗಮನಹರಿಸಬೇಕು. ಆಗ ಅವರ ಕ್ರಿಯಾಶೀಲತೆ ಮತ್ತಷ್ಟು ವೃದ್ಧಿಸುತ್ತದೆ ಎಂದು ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ. ರವಿರಾಜ್ ನಾರಾಯಣ್ ಹೇಳಿದ್ದಾರೆ.
ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ಸಾಂಸ್ಕೃತಿಕ ಉತ್ಸವ ಚುಂಚನ- 2013 ರಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಮೂಲಕವೇ ತಮ್ಮ ಪಠ್ಯ ಕ್ರಮದಲ್ಲೂ ಹಿಡಿತ ಸಾಧಿಸಿ, ಈ ದೇಶದ ಮಹಾನ್ ತಂತ್ರಜ್ಞರಾಗಬಹುದೆಂದು ಅವರು ಹೇಳಿದರು.
ನಗರಸಭಾ ಆಯುಕ್ತ ಎಚ್.ಜಿ. ಪ್ರಭಾಕರ್ ಮಾತನಾಡಿ, ಪ್ರತಿಯೊಬ್ಬರಿಗೂ ಕನಸುಗಳಿರುತ್ತವೆ. ಆದರೆ, ಆ ಕನಸುಗಳನ್ನೇ ಮೆಲುಕು ಹಾಕುವ ಬದಲು ಅದನ್ನೇ ಕಾರ್ಯಗತಗೊಳಿಸುವತ್ತ ಯೋಚಿಸಬೇಕು. ವಾಸ್ತವ ಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಈ ಸಮಾಜಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕೆಂದರು.
ದೇಶದಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ, ಶೇ. 40ರಷ್ಟು ಯುವಶಕ್ತಿಯನ್ನು ಹೊಂದಿರುವ ದೇಶ ಇದು. ಆದರೆ, ಆ ಶಕ್ತಿಯ ಸಾರ್ಥಕ ಬಳಕೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಐ.ಎಂ. ಮಹೇಶ್‌ಗೌಡ ಮಾತನಾಡಿ, ಸುಸಂಸ್ಕೃತರಾಗಿ ಬದುಕುವ ಕಲೆಯನ್ನು ರೂಢಿಸಿಕೊಳ್ಳಬೇಕೆಂದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಕೆ. ಸುಬ್ಬರಾಯ ವಹಿಸಿದ್ದರು. ಕಾರ್ಯಕ್ರಮವನ್ನು ಪಿ.ವಿ. ಸಂತೋಷ್ ಮತ್ತು ಫಾತಿಮಾ ರುಕ್ಸರ್ ನಿರೂಪಿಸಿದರು. ಗೌತಮಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

