ಸಚಿವ ಸ್ಥಾನ ನೀಡಲು ಒತ್ತಾಯ
ಚಿಕ್ಕಮಗಳೂರು: ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವರಿಷ್ಟರನ್ನು ಆಗ್ರಹಿಸಿದೆ.
ಪಕ್ಷದ ಸಂಘಟನೆ ಹಾಗೂ ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲಾದೆ. ಒಬ್ಬರಿಗಾದರೂ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲವು ಜ್ವಲಂತ ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕಾಗಿ ಜಿಲ್ಲೆಯ ಪಕ್ಷದ ನಾಯಕರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಉದ್ದೇಶಿಸಲಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಮಾಜಿ ಸಚಿವರು ಧನ ಬಲದಿಂದ ಈ ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಇಂತಹ ಸಂದರ್ಭದಲ್ಲಿ ಜಿಲ್ಲೆಗೆ ಸಚಿವ ಸ್ಥಾನ ನೀಡಿದರೆ ಪಕ್ಷದ ಸಂಘಟನೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಪಕ್ಷದ ಸಂಘಟನೆಗಾಗಿ ಜಿಲ್ಲಾ ಹಾಗೂ ಬೂತ್ ಮಟ್ಟದಲ್ಲಿ ಪಕ್ಷದ ಮುಖಂಡರ ಸಭೆಯನ್ನು ನಡೆಸಲಾಗುವುದು. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕಡಿಮೆ ಮತಗಳು ಬಂದಿರುವ ಬೂತ್‌ಗಳನ್ನು ಗುರುತು ಮಾಡಿ ಮುಂದಿನ ಚುನಾವಣೆಗೆ ಅನುಕೂಲವಾಗುವಂತೆ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಹೊಣೆ ಹೊರುತ್ತೇನೆ: ಕಡೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಭವಗೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಮಲ್ಲಿಕಾರ್ಜುನ ಮಾತನಾಡಿ, ಸೋಲಿನ ಹೊಣೆ ಮತ್ತು ಮುಂದಿನ ದಿನಗಳಲ್ಲಿ ಕಡೂರು ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯ ಹೊಣೆಯನ್ನು ಹೊರುವುದಾಗಿ ಹೇಳಿದರು.
ಪಕ್ಷದ ಕೆಲವು ಮುಖಂಡರು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಈ ಸಂಬಂಧ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ದಾಖಲೆ ಸಹಿತ ಪಕ್ಷದ ವರಿಷ್ಟರಿಗೆ ದೂರು ಸಲ್ಲಿಸಲಾಗುವುದು ಎಂದ ಕೆ.ಬಿ. ಮಲ್ಲಿಕಾರ್ಜುನ, ಕಡೂರು ಕ್ಷೇತ್ರದ ಕೆಲವು ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಮಹಮದ್, ವಕ್ತಾರ ಎ.ಎನ್. ಮಹೇಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

