21ರಂದು ಆದಿಚುಂಚನಗಿರಿ ಶ್ರೀಗಳ ಪುರ ಪ್ರವೇಶ
ಕಪ್ರವಾರ್ತೆ,ಚಿಕ್ಕಮಗಳೂರು,ಮೇ16
ನಗರದಲ್ಲಿ ಮೇ 21 ರಂದು ಶ್ರೀ ಆದಿಚುಂಚನಗಿರಿಯ ಭೈರವೈಕ್ಯ ಶ್ರೀಗಳ ದಿವ್ಯನಾಮ ಸ್ಮರಣೆ ಮತ್ತು ನೂತನ ಶ್ರೀಗಳವರ ಚಿಕ್ಕಮಗಳೂರು ಪುರ ಪ್ರವೇಶ ಹಾಗೂ ಗುರುವಂದನಾ ಸಮಾರಂಭ ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಈ ಕಾರ್ಯಕ್ರಮ ಜರುಗಲಿದೆ ಎಂದು ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಗದ್ಗುರು ಮಹಾಸ್ವಾಮಿಗಳವರ ಸನ್ನಿಧಿಯಲ್ಲೇ ಉಳಿದು, ಅವರ ಚಿಂತನ- ಮಂಥನ ಶಕ್ತಿಗಳನ್ನು ಮೈಗೂಡಿಸಿಕೊಂಡು, ಉತ್ತರಾಧಿಕಾರಿಯಾಗಿ ಪೀಠಾಧಿಕಾರ ವಹಿಸಿಕೊಂಡಿರುವ ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳವರು ಪ್ರಥಮ ಬಾರಿಗೆ ಚಿಕ್ಕಮಗಳೂರು ಜಿಲ್ಲಾ ಪುರ ಪ್ರವೇಶ ಮಾಡುತ್ತಿರುವ ಶ್ರೀಗಳಿಗೆ ಅಂದು ಬೆಳಿಗ್ಗೆ 9.30ಕ್ಕೆ ನಗರದ ಕತ್ರಿ ಮಾರಮ್ಮ ದೇವಸ್ಥಾನದಿಂದ ಪೂರ್ಣಕುಂಭ ಸ್ವಾಗತ ಮತ್ತು ಮೆರವಣಿಗೆ ಏರ್ಪಡಿಸಲಾಗಿದ್ದು ಈ ಮೆರವಣಿಗೆ ಹನುಮಂತಪ್ಪ ವೃತ್ತ, ಬಸವನಹಳ್ಳಿ ರಸ್ತೆ ಮಾರ್ಗವಾಗಿ ಜಿಲ್ಲಾ ಒಕ್ಕಲಿಗರ ಸಮುದಾಯ ಭವನ ತಲುಪಲಿದೆ ಎಂದು ಹೇಳಿದರು.
ಜಿಲ್ಲಾ ಒಕ್ಕಲಿಗರ ಸಂಘದ ಹಾಗೂ ನಾಗರೀಕ ಗುರುವಂದನಾ ಸಮಿತಿ ಅಧ್ಯಕ್ಷರಾದ ಐ.ಎಂ. ಮಹೇಶಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಗುರುವಂದನಾ ಸಮಿತಿಯ ಕಾರ್ಯಾಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಸದರು, ಸಚಿವರು, ಜಿಲ್ಲಾ ಪಂಚಾಯ್ತಿ ಅಧ್ಯಕ್ಷರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದ ಶ್ರೀಗಳು, ಜಿಲ್ಲೆಗೆ ಪೂಜ್ಯರು ಪ್ರಪ್ರಥಮ ಬಾರಿಗೆ ಪುರ ಪ್ರವೇಶ ಮಾಡುತ್ತಿರುವ ಈ ಶುಭ ಸಂದರ್ಭದಲ್ಲಿ ಜಿಲ್ಲೆಯ ಸಮಸ್ತ ಸದ್ಭಕ್ತರು ಹಾಗೂ ನಾಗರಿಕರು ಅಪಾರ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಐ.ಎಂ. ಮಹೇಶ್ಗೌಡ, ಡಾ. ಜೆ.ಪಿ. ಕೃಷ್ಣೇಗೌಡ, ಸಂದೀಪ್ ಹಾಗೂ ಡಾ. ಸಿ.ಕೆ. ಸುಬ್ರಾಯ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

