ನಾಳೆ ಕೆ. ಮಹಮ್ಮದ್ಗೆ ಸನ್ಮಾನ
ನರಸಿಂಹರಾಜಪುರ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2012-13 ಮತ್ತು 2013-14ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುರಸ್ಕಾರ ಸಮಾರಂಭವು ಮೇ 18ರಂದು ಮಂಗಳೂರಿನಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಕೆ. ಮಹಮ್ಮದ್ ಅವರಿಗೆ 2013ನೇ ಸಾಲಿನ ಗೌರವ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಎನ್.ಎ. ಶೇಖ್ ತಿಳಿಸಿದ್ದಾರೆ.
2013ನೇ ಸಾಲಿನಲ್ಲಿ ಬ್ಯಾರಿ ಭಾಷೆ, ಕಲೆ, ಸಾಹಿತ್ಯ, ಸಂಘಟನಾ ಕ್ಷೇತ್ರದ ಸಾಧನೆಗಾಗಿ ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಅಧ್ಯಕ್ಷ ಕೆ. ಮಹಮ್ಮದ್ ಅವರನ್ನು ಗೌರವ ಪ್ರಶಸ್ತಿಗೆ ಆರಿಸಲಾಗಿದೆ.ಪ್ರಶಸ್ತಿಯು 10 ಸಾವಿರ ನಗದು, ಸ್ಮರಣಿಕೆ ಮತ್ತು ಸನ್ಮಾನ ಪತ್ರ ಒಳಗೊಂಡಿರುತ್ತದೆ.
ಬ್ಯಾರಿಗಳಿಗೆ ಗೌರವ: ಕೆ. ಮಹಮ್ಮದ್ ಅವರಿಗೆ ಗೌರವ ಪ್ರಶಸ್ತಿ ಬಂದಿರುವುದು ಜಿಲ್ಲಾ ಬ್ಯಾರಿ ಸಮುದಾಯದವರಿಗೆ ಸಂದ ಗೌರವವಾಗಿದೆ. ಜಿಲ್ಲೆಯಲ್ಲಿ ಕೆ. ಮಹಮ್ಮದ್ ಅವರ ಬ್ಯಾರಿ ಸಮುದಾಯವರ ಸೇವೆ ಸ್ಮರಣೀಯವಾಗಿದೆ. ಜಿಲ್ಲೆಯ ಬ್ಯಾರಿ ಸಮುದಾಯದ ಪರವಾಗಿ ಅವರನ್ನು ಅಭಿನಂದಿಸುತ್ತೇನೆ. ಸಮಾರಂಭಕ್ಕೆ ಜಿಲ್ಲೆಯ ಎಲ್ಲಾ ಬ್ಯಾರಿ ಸಮುದಾಯದವರು ಭಾಗವಹಿಸುವಂತೆ ಅವರು ಕೋರಿದ್ದಾರೆ.
26ರಂದು ಪೂರ್ವಭಾವಿ ಸಭೆ: ಜೂನ್ ಎರಡನೇ ವಾರದಲ್ಲಿ ಕೊಪ್ಪದಲ್ಲಿ ಜಿಲ್ಲಾ ಮಟ್ಟದ ದಫ್ ಕಾರ್ಯಕ್ರಮ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ. ಇದಕ್ಕಾಗಿ ಪೂರ್ವಭಾವಿ ಸಭೆಯನ್ನು 26ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಎನ್.ಎ. ಶೇಖಬ್ಬ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

