ಚಿಕ್ಕಮಗಳೂರು

ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ಅಗತ್ಯವಿಲ್ಲ

Published On :

ಕಪ್ರವಾರ್ತೆ,ಚಿಕ್ಕಮಗಳೂರು,ಮೇ17
ಬಡವರ ಸಮಸ್ಯೆಗಳಿಗೆ ಸ್ಪಂಧಿಸದ ಅಧಿಕಾರಿಗಳ ಸೇವೆ ನಮಗೆ ಅಗತ್ಯವಿಲ್ಲ. ಅಂತಹ ನಡವಳಿಕೆಗಳನ್ನು ನಾವು ಸಹಿಸುವುದಿಲ್ಲ ಎಂದು ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಎಚ್ಚರಿಸಿದ್ದಾರೆ.
 ಕ್ಷೇತ್ರದ ವಸ್ತಾರೆ ಗ್ರಾಮದಲ್ಲಿ ಶುಕ್ರವಾರ ವಿವಿಧ ಫಲಾನುಭವಿಗಳಿಗೆ ಸರ್ಕಾರದ ವೈಯಕ್ತಿಕ ಸೌಲಭ್ಯಗಳನ್ನು ವಿತರಿಸಿ ಮಾತನಾಡಿದ ಅವರು, ಕೆಲವು ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎನ್ನುವ ದೂರುಗಳಿವೆ. ಇನ್ನು ಮುಂದೆ ಅಧಿಕಾರಿಗಳು ಯಾವುದೇ ಸಬೂಬು ಹೇಳದೆ ಕರ್ತವ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಸಮಸ್ಯೆಗಳ ಪರಿಹಾರ: ಜನ ಸಂಪರ್ಕ ಸಭೆಗಳನ್ನು ಮಾಡುವ ಮೂಲಕ ಆಡಳಿತವನ್ನು ಚುರುಕುಗೊಳಿಸಲಾಗುವುದು. ಗ್ರಾಪಂ ವ್ಯಾಪ್ತಿಯ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಪ್ರಯತ್ನಿಸಲಾಗುವುದು. ಆಯಾ ಗ್ರಾಪಂನಲ್ಲಿ ತಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿ ಸಮಸ್ಯೆಗಳನ್ನು ಪಕ್ಷಾತೀತವಾಗಿ ಪರಿಹರಿಸಲಾಗುವುದು. ಸ್ಥಳೀಯ ಜನರ ಕಷ್ಟ, ಸುಖದಲ್ಲಿ ಭಾಗಿಯಾಗುತ್ತೇನೆ ಎಂದರು.
 ಕ್ಷೇತ್ರದಾದ್ಯಂತ ಪ್ರವಾಸ ಮಾಡುವ ಮೂಲಕ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಗುವುದು. ಆಭಿಮಾನಿಗಳು, ಮುಖಂಡರ ಶ್ರಮದಿಂದ ನಾವು ಗೆಲುವು ಸಾಧಿಸಿದ್ದೇವೆ. ಅವರಿಗೆ ಧನ್ಯವಾದಗಳನ್ನು ಹೇಳುವುದು ನಮ್ಮ ಸೌಜನ್ಯ ಎಂದು ಹೇಳಿದರು.
ಶಾಸಕರು ಸ್ಪಂಧಿಸಬೇಕು: ಇದೇ ಸಂದರ್ಭದಲ್ಲಿ ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಸೇರಿದಂತೆ ವಿವಿಧ ಸೌಲಭ್ಯಗಳ ದಾಖಲೆ ಪತ್ರಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಆಲ್ದೂರು ಬ್ಲಾಕ್ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ವಸ್ತಾರೆ ರವಿ ಮಾತನಾಡಿ, ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು ಇತರೆ ಮೂಲ ಸೌಕರ್ಯಗಳ ಕೊರತೆ ಇದೆ. ಬಡ ಜನರಿಗೆ ಅನುಕೂಲವಾಗುವಂತಹ ಅನೇಕ ಯೋಜನೆಗಳು ಬರಬೇಕಿದೆ ಇದಕ್ಕೆ ಶಾಸಕರು ಸ್ಪಂಧಿಸಬೇಕು ಎಂದು ಮನವಿ ಮಾಡಿದರು.
 ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಲಲಿತ, ತಾಪಂ ಮಾಜಿ ಅಧ್ಯಕ್ಷ ಡಿ.ಜೆ. ಸುರೇಶ್, ಸ್ಥಳೀಯ ಮುಖಂಡರಾದ ಪದ್ಮಯ್ಯ, ಲಕ್ಷ್ಮಣಗೌಡ, ಗ್ರಾಪಂ ಉಪಾಧ್ಯಕ್ಷ ನವೀನ್, ತಾಪಂ ಸದಸ್ಯೆ ಈರಮ್ಮ, ತೋಟಪ್ಪಗೌಡ, ಚಂದಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.