ಜೀತಪದ್ಧತಿ ಇನ್ನೂ ಜೀವಂತ
ಸಾಗರ: ಜೀತಮುಕ್ತ ಕಾಯ್ದೆ ಜಾರಿಯಲ್ಲಿದ್ದರೂ, ರಾಜ್ಯದ ಕರಾವಳಿಯ ಕೆಲವು ತಾಲೂಕುಗಳನ್ನು ಹೊರತುಪಡಿಸಿ ಇತರೆಡೆ ಜೀತಪದ್ಧತಿ ಇನ್ನೂ ಜೀವಂತವಾಗಿರುವುದು ಖೇದದ ಸಂಗತಿ ಎಂದು ಕೇಂದ್ರ ಸರ್ಕಾರದ ಜೀತಮುಕ್ತಿ ಕೋರ್ ಸಮಿತಿ ಸದಸ್ಯ ಕಿರಣ ಕಮಲ್ ಪ್ರಸಾದ್ ಹೇಳಿದರು.
ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸಾಗರ ಉಪವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನಾ ಜಾಗೃತಿ ಸಮಿತಿ ಮರುಸಮೀಕ್ಷೆ ಕಾರ್ಯಾಗಾರದಲ್ಲಿ, ಯಾವುದೇ ಸಾಮಾಜಿಕ ಪಿಡುಗುಗಳನ್ನು ಕೇವಲ ಕಾನೂನುಗಳಿಂದ ಹೊಡೆದೋಡಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಜನರಲ್ಲಿ ಇಚ್ಚಾಶಕ್ತಿ ಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಉಪವಿಭಾಗಾಧಿಕಾರಿ ಡಾ. ಉದಯಕುಮಾರ ಶೆಟ್ಟಿ ಮಾತನಾಡಿ, ಮೇಲ್ನೋಟಕ್ಕೆ ಜೀತ ಪದ್ಧತಿ ಕಾಣದಿದ್ದರೂ ಅಂತರ್ಗತವಾಗಿ ಇದೆ. ಗೌರವಯುತ ಜೀವನ ನಡೆಸುವುದು ಪ್ರತಿಯೊಬ್ಬರ ಹಕ್ಕು. ಅದನ್ನು ಅವರಿಗೆ ಒದಗಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲೆ ಇದೆ. ಜೀತಕ್ಕೆ ಒಳಗಾದವರಿಗೆ ಘನತೆ ಗೌರವ ಇರುವುದಿಲ್ಲ. ಶಿಕಾರಿಪುರ ತಹಸೀಲ್ದಾರ್ ಚಂದ್ರಶೇಖರಪ್ಪ, ಸೊರಬ ತಹಸೀಲ್ದಾರ್ ಎನ್. ತೇಜಸ್ ಕುಮಾರ್, ಹೊಸ ನಗರ ತಹಸೀಲ್ರಾರ್ ಅರ್ಚನ ಎಂ.ಎಸ್., ಕಾರ್ಯನಿರ್ವಹಣಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

