ಚಿಕ್ಕಮಗಳೂರು

ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಶಾಸಕ ದತ್ತ

Published On :

ಕಡೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಕೆಯಾಗಿದ್ದರೂ ಅಗತ್ಯ ವೈದ್ಯರಿಲ್ಲದೇ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಆರೋಗ್ಯ ಇಲಾಖೆ ಆಯುಕ್ತರೊಂದಿಗೆ ಚರ್ಚಿಸಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ವೈ.ಎಸ್.ವಿ. ದತ್ತ ಹೇಳಿದ್ದಾರೆ.
 ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ರೋಗಿಗಳನ್ನು ಮಾತನಾಡಿಸಿ ನಂತರ ಆಸ್ಪತ್ರೆ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಕಡೂರು ಸಾರ್ವಜನಿಕ ಆಸ್ಪತ್ರೆಯನ್ನು ಶಾಸಕರಾಗಿದ್ದ ಕೆ. ಎಂ. ಕೃಷ್ಣಮೂರ್ತಿಯವರ ಅವಧಿಯಲ್ಲಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಆದರೆ ಇಲ್ಲಿ 11 ವೈದ್ಯರ ಹುದ್ದೆಗಳಿದ್ದು ಅದರಲ್ಲಿ  ಫಿಜಿಶಿಯನ್ ಸೇರಿದಂತೆ 6 ಹುದ್ದೆಗಳು ಖಾಲಿಯಿವೆ. ಇದರಿಂದ ಪ್ರತಿದಿನ ಗ್ರಾಮಾಂತರ ಪ್ರದೇಶಗಳಿಂದ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಸರ್ಕಾರದ ಕೌನ್ಸಿಲಿಂಗ್ ಪದ್ದತಿ ಮೂಲಕ ಈಗಗಾಲೇ ಇರುವ ಇಬ್ಬರು ವೈದ್ಯರು ವರ್ಗಾವಣೆಯಾಗಿದ್ದಾರೆ. ಆಸಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೂ ವೈದ್ಯರಿಲ್ಲದೆ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಆಯುಕ್ತರೊಂದಿಗೆ ಮಾತುಕತೆ ನಡೆಸಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
 ತಾಲೂಕಿನ ಸಿಂಗಟಗೆರೆ ಹೋಬಳಿಯ ಎಸ್. ಮಾದಾಪುರ ಗ್ರಾಪಂನ ಸಿದ್ರಾಮನಹಳ್ಳಿಯಲ್ಲಿ ಡೆಂಘೀ ಜ್ವರ ಸೋಂಕಿನಿಂದಾಗಿ ಹಲವರು ಆಸ್ಪತ್ರೆಗಳಿಗೆ ದಾಖಲಾಗಿರುವ ವರದಿ ಬಂದಿದೆ. ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಯನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
 ಸಿದ್ರಾಮನಹಳ್ಳಿ ಗ್ರಾಮದ ರಿಯಾಜ್ ಅಹಮದ್, ಗುಲ್ಜಾರ್ ಬೇಗ್, ಫೈಸುಲ್ಲಾ, ಚಾಂದ್ ಪಾಷಾ,ಆತಿಕ್ ಪಾಷಾ, ಜಾಯಿರಾ ಬಾನು, ಫಸ್ಲು ರಹಮಾನ್, ಸೈಫುಲ್ಲಾ ಸಾಬ್, ಸಲ್ಮಾ ಬಾನು ಸೇರಿದಂತೆ ಸುಮಾರು 15ಕ್ಕೂ ಹೆಚು ಮಂದಿ ಡೆಂಘೀ ಜ್ವರದಿಂದ ಬಳಲುತ್ತಾ ವಿವಿಧ ಆಸ್ಪತೆಗಳಿಗೆ ದಾಖಲಾಗಿದ್ದಾರೆ. ಈ ಬಗ್ಗೆ ಗ್ರಾಮಸ್ಥರಾದ ದೇವರಾಜ್, ದಾದಾಪೀರ್,  ನಸ್ರುಲ್ಲಾ, ಅಸ್ಮತ್ ಪಾಷಾ ಮುಂತಾದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿ ಗ್ರಾಮದ ಸ್ವಚ್ಛತೆ ಬಗ್ಗೆ ಗಮನಹರಿಸುತ್ತಿಲ್ಲ ಎಂದು ದೂರಿದ್ದಾರೆ. ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಂ. ಮಹೇಶ್ವರಪ್ಪ, ಭಂಢಾರಿ ಶ್ರೀನಿವಾಸ್, ಎನ್. ಇಮಾಮ್, ಕೆ.ಎಸ್. ತಿಪ್ಪೇಶ್, ಮಹಮದ್ ಇಸ್ಮಾಯಿಲ್, ಬಿ.ಟಿ. ಗಂಗಾಧರ ನಾಯ್ಕ, ಶೂದ್ರ ಶ್ರೀನಿವಾಸ್, ಜಿಗಣೇಹಳ್ಳಿ ನೀಲಕಂಠಪ್ಪ, ತಮ್ಮಯ್ಯಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.