'ಗ್ರಾಹಕರೊಂದಿಗೆ ಉತ್ತಮ ಸಂಬಂಧವಿರಲಿ'
ನರಸಿಂಹರಾಜಪುರ: ಸಹಕಾರ ಸಂಘಗಳು ಗ್ರಾಹಕರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡರೆ ಪ್ರಗತಿ ಹೊಂದಲು ಸಾಧ್ಯ ಎಂದು ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಎಚ್.ಆರ್. ಕೃಷ್ಣೇಗೌಡ ತಿಳಿಸಿದರು.
ಬಾಳೆಹೊನ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ನಡೆದ ಸಭೆಯಲ್ಲಿ ಮಾತನಾಡಿ, ಸಹಕಾರ ಸಂಘಗಳಿಗೆ ಲಾಭ ಗಳಿಸುವುದು ಎಷ್ಟು ಮುಖ್ಯವೋ ಗ್ರಾಹಕರಿಗೆ ಸೇವೆ ನೀಡುವುದು ಅಷ್ಟೇ ಮುಖ್ಯ. ರೈತರ ಬೇಡಿಕೆಯಾದ ರಸಗೊಬ್ಬರ ಸಂಗ್ರಹಿಸಿ ಸೂಕ್ತ ಸಮಯದಲ್ಲಿ ಒದಗಿಸಬೇಕು. ಕೃಷಿಗೆ ಸಂಬಂಧಿಸಿ ಟ್ರ್ಯಾಕ್ಟರ್, ಪವರ್ ಟ್ರಿಲ್ಲರ್ ಮತ್ತು ಇತರೆ ಕೃಷಿ ವಾಹನಗಳ ಸಾಲ ನೀಡುವುದಕ್ಕೆ ಹೆಚ್ಚು ಗಮನ ನೀಡಬೇಕು ಎಂದು ಸಲಹೆ ನೀಡಿದರು. ಬಾಳೆಹೊನ್ನೂರು ಸಹಕಾರ ಸಂಘ ಕಳೆದ 5 ವರ್ಷಗಳಿಂದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಗಳಿಸುತ್ತಿರುವುದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆಯ ಅಧ್ಯಕ್ಷತೆಯನ್ನು ಬಾಳೆಹೊನ್ನೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಸುಧಾಕರ್ ವಹಿಸಿದ್ದರು. ಚಿಕ್ಕಮಗಳೂರು ಜಿಲ್ಲಾ ಸಹಕಾರ ಸಂಘಗಳ ಸಹಾಯಕ ಉಪ ನಿಬಂಧಕ ಕೆ.ಎಂ. ಶಿವಕುಮಾರ ಸ್ವಾಮಿ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಬಸವರಾಜಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ವಾಸುದೇಮೂರ್ತಿ, ವಿಜೇಂದ್ರ, ಸಂಘದ ನಿರ್ದೇಶಕ ಕೆ.ಕೆ. ವೆಂಕಟೇಶ್, ಕಾರ್ಯನಿರ್ವಹಣಾಧಿಕಾರಿ ಸೂರ್ಯನಾರಾಯಣ ಇದ್ದರು.
ಇದೇ ಸಂದರ್ಭದಲ್ಲಿ ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿರ್ದೇಶಕ ಎಚ್.ಆರ್. ಕೃಷ್ಣೇಗೌಡರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

